Sunday, June 14, 2026
spot_imgspot_img
spot_imgspot_img

ಡಿಕೆಶಿ‌ ಮೇಲೆ ಸಿಬಿಐ ದಾಳಿ ಖಂಡಿಸಿ ಮಂಗಳೂರಿನಲ್ಲಿ ಯುವ ಕಾಂಗ್ರೆಸ್‌ ಪ್ರತಿಭಟನೆ.. – ಕೈ ಮುಖಂಡ ಮಿಥುನ್ ರೈ ಪೊಲೀಸರ ವಶಕ್ಕೆ.!

- Advertisement -
- Advertisement -

ಮಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ ನಡೆಸಿರುವುದನ್ನು ಖಂಡಿಸಿ ದ.ಕ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ನಗರದ ಕಾಂಗ್ರೆಸ್ ಕಚೇರಿಯ ಮುಂಭಾಗ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.

ಈ ಸಂದರ್ಭ ಪೊಲೀಸರು ದ.ಕ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಅವರನ್ನು ವಶಕ್ಕೆ ಪಡೆದಿದ್ದಾರೆ.
ಪ್ರತಿಭಟನಾಕಾರರು ಏಕಾಏಕಿ ರಸ್ತೆ ಮಧ್ಯೆ ಟೈರ್​​​​ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸರು ಇದನ್ನು ತಡೆಯಲೆತ್ನಿಸಿದಾಗ ಪ್ರತಿಭಟನಾಕಾರರು ರಸ್ತೆ ಮಧ್ಯೆಯೇ ಕುಳಿತು ಘೋಷಣೆ ಕೂಗಿದರು.

 ಪೊಲೀಸರು ಪ್ರತಿಭಟನೆಯ ನೇತೃತ್ವ ವಹಿಸಿದ ಮಿಥುನ್ ರೈ ಅವರನ್ನು ವಶಕ್ಕೆ ಪಡೆದು ವಾಹನಕ್ಕೆ ಹತ್ತಿಸಿದ ಕೂಡಲೇ ಆಕ್ರೋಶಿತರಾದ ಪ್ರತಿಭಟನಾಕಾರರು ಪೊಲೀಸ್ ವಾಹನ ತಡೆಯಲೆತ್ನಿಸಿದರು. ಬಳಿಕ ಕಾಂಗ್ರೆಸ್ ಮುಖಂಡರ ಮಧ್ಯಪ್ರವೇಶದಿಂದ ಪರಿಸ್ಥಿತಿ ತಣ್ಣಗಾಯಿತು.

- Advertisement -

Related news

error: Content is protected !!