Sunday, June 29, 2025
spot_imgspot_img
spot_imgspot_img

ರಾಜ್ಯದಲ್ಲಿ ಗಂಡಸರಿಗೂ ಫ್ರೀ ಬಸ್ ಸೌಲಭ್ಯ ನೀಡುವ ಬಗ್ಗೆ ಸುಳಿವು ಕೊಟ್ಟ ಡಿಕೆಶಿ

- Advertisement -
- Advertisement -

ಬೆಂಗಳೂರು: ಶಕ್ತಿ ಯೋಜನೆಯಡಿ ವಯೋಮಿತಿಗೊಳಪಡಿಸಿ ಗಂಡಸರಿಗೂ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಕುರಿತು ಸರ್ಕಾರದಲ್ಲಿ ಚರ್ಚೆ ನಡೆಸಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದು, ಈ ಮೂಲಕ ಗಂಡಸರಿಗೂ ಫ್ರೀ ಬಸ್ ಪ್ರಯಾಣ ಸೌಲಭ್ಯ ನೀಡುವ ಬಗ್ಗೆ ಸುಳಿವು ಕೊಟ್ಟಿದ್ದಾರೆ.

ಜವಾಹರಲಾಲ್ ನೆಹರೂ ಅವರ 135ನೇ ಜಯಂತಿ ಹಾಗೂ ಮಕ್ಕಳ ದಿನಾಚರಣೆ ಅಂಗವಾಗಿ ವಿಧಾನಸೌಧದಲ್ಲಿ ಗುರುವಾರ ನಡೆದ ಸಂವಾದದಲ್ಲಿ ಮಾತನಾಡಿದ ಅವರು, ಶಕ್ತಿ ಯೋಜನೆಯಡಿ ಒಂದು ವಯೋಮಾನದ ವರೆಗಿನ ಗಂಡುಮಕ್ಕಳಿಗೂ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಬಗ್ಗೆ ಸರ್ಕಾರದಲ್ಲಿ ಚರ್ಚಿಸಿ ಯೋಚಿಸಿ ಕ್ರಮ ವಹಿಸಲಾಗುವುದು ಎಂದಿದ್ದಾರೆ.

ಡಿಕೆಶಿ ಹೇಳಿಕೆಗೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಡಿಸಿಎಂ ಶಿವಕುಮಾರ್ ಮಕ್ಕಳ ಜೊತೆಗೆ ಮಾತನಾಡಿದ್ದಾರೆ. ಆ ಬಗ್ಗೆ ನನಗೆ ಏನು ಮಾಹಿತಿ ಇಲ್ಲ. ಅವರೊಂದಿಗೆ ಚರ್ಚಿಸಿ ಹೇಳುವೆ ಎಂದು ಹೇಳಿದ್ದಾರೆ.

- Advertisement -

Related news

error: Content is protected !!