- Advertisement -
- Advertisement -


ದಾವಣಗೆರೆ: ಮಾಯಕೊಂಡ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಮಡ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಮಾಯಕೊಂಡ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ| ಜಿ.ಆರ್. ಗೋವಿಂದರಾಜ್ (53) ಎಮದು ಗುರುತಿಸಲಾಗಿದೆ.
ದಾವಣಗೆರೆಯ ಎಸ್.ಎಸ್. ಆಸ್ಪತ್ರೆಯ ರಸ್ತೆ ಬದಿಯಲ್ಲಿ ಅವರ ಶವ ಪತ್ತೆಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಡಾ.ಗೋವಿಂದರಾಜ್ ಕಳೆದ ಏಳು ವರ್ಷದಿಂದ ಮಾಯಕೊಂಡ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಮೂಲತಃ ಮಾಯಕೊಂಡ ಗ್ರಾಮದದವರು. ದಾವಣಗೆರೆಯಲ್ಲಿ ವಾಸವಾಗಿದ್ದರು. ಮಂಗಳವಾರ ದಾವಣಗೆರೆಯಲ್ಲಿ ಸಭೆಯಲ್ಲಿ ಭಾಗವಹಿಸುವುದಾಗಿ ಕಡತಗಳೊಂದಿಗೆ ಬಂದಿದ್ದರು. ಬುಧವಾರ ಕರ್ತವ್ಯಕ್ಕೆ ಹಾಜರಾಗಿರಲಿಲ್ಲ ಎಂದು ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ದಾವಣಗೆರೆಯ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -