Sunday, July 26, 2026
spot_imgspot_img
spot_imgspot_img

ಮಂಗಳೂರು: ಹರೇಕಳ ಹಾಜಬ್ಬ, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್

- Advertisement -
- Advertisement -

ಮಂಗಳೂರು, ಮಾ. 29: ಅಕ್ಷರ ಸಂತ, ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಹಾಗೂ ದೈವ ನರ್ತಕ ರವೀಶ್ ಪಡುಮಲೆಯವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.

ಮಂಗಳೂರು ವಿಶ್ವವಿದ್ಯಾನಿಲಯದ 44ನೇ ವಾರ್ಷಿಕ ಘಟಿಕೋತ್ಸವವು ವಿಶ್ವವಿದ್ಯಾನಿಲಯದ ಆವರಣದ ಮಂಗಳ ಸಭಾಂಗಣದಲ್ಲಿ ಭಾನುವಾರ ಜರುಗಿತು. ಕಾರ್ಯಕ್ರಮದಲ್ಲಿ ಕರ್ನಾಟಕದ ರಾಜ್ಯಪಾಲರು ಹಾಗೂ ವಿಶ್ವವಿದ್ಯಾನಿಲಯದ ಕುಲಾಧಿಪತಿಯಾದ ಥಾವರ್ ಚಂದ್ ಗೆಹ್ಲೋಟ್ ಅವರು ಗಣ್ಯರಿಗೆ ಗೌರವ ಡಾಕ್ಟರೇಟ್ ನೀಡಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಲ್. ಧರ್ಮ, ಕುಲಸಚಿವ ಪ್ರೊ. ದೇವೇಂದ್ರಪ್ಪ (ಪರೀಕ್ಷಾಂಗ), ಪ್ರಭಾರ ಕುಲಸಚಿವ ಗಣೇಶ್ ಸಂಜೀವ, ಹಣಕಾಸು ಅಧಿಕಾರಿ ಡಾ. ವೈ. ಸಂಗಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

- Advertisement -

Related news

error: Content is protected !!