
ಬೆಂಗಳೂರು : ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪ ಸಂಬಂಧ ವ್ಯಕ್ತಿಯೊಬ್ಬನ್ನು ರಾಜರಾಜೇಶ್ವರಿ ನಗರ ಠಾಣೆಯ ಪೊಲೀಸರು ಬಂಧಿಸಿರುವುದು ವರದಿಯಾಗಿದೆ.ಬಂಧಿತ ಆರೋಪಿಯನ್ನು ಹನಿಯೂರು ಚಂದ್ರೇಗೌಡ ಎಂದು ಗುರುತಿಸಲಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯನೆಂದು ಹೇಳಿಕೊಂಡಿರುವ ಈತನನ್ನು ಪೊಲೀಸರು ಬಂಧಿಸಿದ್ದಾರೆ.ಲೈಂಗಿಕ ದೌರ್ಜನ್ಯ ಎಸಗಿ, ವಿಡಿಯೋ ಹಾಗೂ ಫೋಟೊಗಳನ್ನು ಚಂದ್ರೇಗೌಡ ತೆಗೆದುಕೊಳ್ಳುತ್ತಿದ್ದರು.




ಬಳಿಕ ಆ ಫೋಟೊ–ವಿಡಿಯೊಗಳನ್ನು ಇಟ್ಟುಕೊಂಡು ಪೀಡಿಸುತ್ತಿದ್ದ ಎಂಬ ಆರೋಪ ಹೇಳಿ ಬಂದಿದೆ. ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.‘
ಆರೋಪಿಯ ಮೊಬೈಲ್ ವಶಕ್ಕೆ ಪಡೆದುಕೊಂಡು ಪರಿಶೀಲನೆ ನಡೆಸಲಾಗಿದೆ. ಮೊಬೈಲ್‌ನಲ್ಲಿ 20ಕ್ಕೂ ಹೆಚ್ಚು ಮಹಿಳೆಯರ ಫೋಟೊಗಳು–ವಿಡಿಯೋ ಸಿಕ್ಕಿವೆ. ಕೆಲವು ಧಾರಾವಾಹಿಗಳಲ್ಲೂ ಚಂದ್ರೇಗೌಡ ನಟಿಸಿದ್ದರು. ನಕಲಿ ಗುರುತಿನ ಚೀಟಿ ಮಾಡಿಕೊಂಡು ಹಲವರಿಗೆ ಬೆದರಿಕೆ ಹಾಕಿದ್ದರು ಎಂಬುದು ತನಿಖೆಯಿಂದ ಗೊತ್ತಾಗಿದೆʼ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.








