Monday, June 30, 2025
spot_imgspot_img
spot_imgspot_img

ವಿಟ್ಲ ಭಗವಾನ್ ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಬಸದಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಭೇಟಿ

- Advertisement -
- Advertisement -

ಜೀರ್ಣೋದ್ಧಾರ ಕೆಲಸ ಕಾರ್ಯಗಳ ಪರಿಶೀಲನೆ

ದ ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಭಗವಾನ್ ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಫೆ. 13 ರಿಂದ ಫೆ. 17 ರವರೆಗೆ ವಿಟ್ಲ ಭ| ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಬಸದಿ ತೀರ್ಥಂಕರರ ಮತ್ತು ಭ| ೧೦೦೮ ಶ್ರೀ ಮಹಾವೀರ ತೀರ್ಥಂಕರರ ಪಂಚಕಲ್ಯಾಣ ಮಹೋತ್ಸವ ಮತ್ತು ನೂತನ ಬಿಂಬ ಪ್ರತಿಷ್ಠೆ ಹಾಗೂ ಶ್ರೀ ಯಕ್ಷಿ ಪದ್ಮಾವತಿ ಅಮ್ಮನವರ ಮತ್ತು ಶ್ರೀ ಯಕ್ಷಿ ಜ್ವಾಲಾಮಾಲಿನಿ ಅಮ್ಮನವರ ಪ್ರತಿಷ್ಠಾ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ.

ಈ ಹಿನ್ನಲೆ ಭಗವಾನ್ ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಜೀರ್ಣೋದ್ಧಾರ ಕೆಲಸ ಕಾರ್ಯಗಳು ಭರದಿಂದ ಸಾಗುತ್ತಿದ್ದು, ಇಂದು ಜೀರ್ಣೋದ್ಧಾರ ಮತ್ತು ಪಂಚಕಲ್ಯಾಣ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷರು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ಭೇಟಿ ನೀಡಿ ಜೀರ್ಣೋದ್ದಾರ ಕಾರ್ಯಗಳನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಭಗವಾನ್ ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಬಸದಿ ವಿಟ್ಲ ಇಲ್ಲಿನ ಅನುವಂಶಿಕ ಆಡಳಿತ ಮೊಕ್ತೇಸರರು ಡಿ.ವಿನಯ ಕುಮಾರ್‌, ಜೀರ್ಣೋದ್ಧಾರ ಮತ್ತು ಪಂಚಕಲ್ಯಾಣ ಮಹೋತ್ಸವ ಸಮಿತಿಯ ಅಧ್ಯಕ್ಷರು, ಜಿತೇಶ್‌ ಎಂ ಸೇರಿದಂತೆ ಹಲವರು ಉಪಸ್ಥಿತರಿದ್ದರು.

- Advertisement -

Related news

error: Content is protected !!