Thursday, April 25, 2024
spot_imgspot_img
spot_imgspot_img

ಡ್ರಗ್ಸ್ ಜಾಲ ಪ್ರಕರಣ ಸಂಬಂಧ ವಿಚಾರಣೆ ನಡೆಸುತ್ತಿರುವ ನ್ಯಾಯಾಧೀಶರಿಗೆ ಬಾಂಬ್ ಬೆದರಿಕೆ-ನಾಲ್ವರು ಆರೋಪಿಗಳು ಪೊಲೀಸರ ಕಸ್ಟಡಿಗೆ

- Advertisement -G L Acharya panikkar
- Advertisement -

ಬೆಂಗಳೂರು (ಅ 20) : ಡ್ರಗ್ಸ್ ಜಾಲ ಪ್ರಕರಣ ಸಂಬಂಧ ವಿಚಾರಣೆ ನಡೆಸುತ್ತಿರುವ ನ್ಯಾಯಾಧೀಶರಿಗೆ ಬಾಂಬ್ ಬೆದರಿಕೆಯೊಡ್ಡಿ ಪತ್ರ ಬರೆದಿರುವ ಹಿನ್ನೆಲೆ ನಾಲ್ವರು ಆರೋಪಿಗಳನ್ನು ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ.

ತುಮಕೂರಿನ ರಾಜಶೇಖರ್, ವೇದಾಂತ್, ಶಿವಪ್ರಕಾಶ್, ರಮೇಶ್ ಎಂಬುವರನ್ನು ಕಸ್ಟಡಿಗೆ ಪಡೆಯಲಾಗಿದೆ. ಅವರನ್ನು ಬೆಂಗಳೂರಿಗೆ ಕರೆತಂದು ವಿಚಾರಣೆ ನಡೆಸಿ‌ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು. ನಾಲ್ವರು ಸಂಬಂಧಿಕರು. ಆಸ್ತಿ ಹಂಚಿಕೆ ಸಂಬಂಧ ಮನಸ್ತಾಪವಿತ್ತು. ಅದೇ ಕಾರಣಕ್ಕೆ ರಾಜಶೇಖರ್ ಎಂಬಾತ, ಶಿವಪ್ರಕಾಶ್, ವೇದಾಂತ್ ಹಾಗೂ ರಮೇಶ್ ಹೆಸರಿನಲ್ಲಿ ಪತ್ರ ಬರೆದಿದ್ದ. ಅವರನ್ನು ಜೈಲಿಗೆ ಕಳುಹಿಸುವುದು ಅವನ ಉದ್ದೇಶವಾಗಿತ್ತು ಎಂದು ಗೊತ್ತಾಗಿದೆ. ಆದರೂ ಎಲ್ಲರನ್ನೂ ವಿಚಾರಣೆಗೆ ಒಳಪಡಿಸಬೇಕು. ಅವಾಗಲೇ ನಿಜಾಂಶ ತಿಳಿಯಲಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.

ಸಂಜನಾ ಗಲ್ರಾನಿ, ರಾಗಿಣಿ ದ್ವಿವೇದಿ ಹಾಗೂ ಡ್ರಗ್ಸ್ ಪ್ರಕರಣದ ಎಲ್ಲ ಆರೋಪಿಗಳಿಗೆ ಜಾಮೀನು ನೀಡಬೇಕು. ನಿಮಗೆ ಏನು ಬೇಕು ಕೇಳಿ, ಎಲ್ಲ ಕೊಡುತ್ತೇವೆ. ಅದನ್ನು ಬಿಟ್ಟು ಜಾಮೀನು ನಿರಾಕರಿಸಿದರೆ, ನಿಮ್ಮ ಕಾರಿನ ಎಂಜಿನ್‌ಗೆ ಬಾಂಬ್ ಇಟ್ಟು ಸ್ಪೋಟಿಸುತ್ತೇವೆ ಎಂದು ಬೆದರಿಕೆ ಪತ್ರದಲ್ಲಿ ಬರೆಯಲಾಗಿತ್ತು.

- Advertisement -

Related news

error: Content is protected !!