Sunday, June 14, 2026
spot_imgspot_img
spot_imgspot_img

ಡ್ರಗ್ಸ್ ಮಾಫಿಯಾಕ್ಕೆ ರಾಜ್ಯ ಸರ್ಕಾರದಿಂದ ಕಟ್ಟುನಿಟ್ಟಿನ ಕ್ರಮ

- Advertisement -
- Advertisement -

ರಾಜ್ಯದಲ್ಲಿ‌ನ ಡ್ರಗ್ಸ್ ಮಾಫಿಯಾದಲ್ಲಿ ದಿನದಿಂದ ದಿನಕ್ಕೆ ಆತಂಕಕಾರಿ ಬೆಳವಣಿಗೆ ನಡೆಯುತ್ತಲೇ ಇದೆ. ಇದನ್ನು ಬೇರು ಸಮೇತ ಕಿತ್ತು ಹಾಕಲು ಪಣ ತೊಟ್ಟಿರುವ ರಾಜ್ಯ ಸರ್ಕಾರ ಇದರ ವಿರುದ್ಧ ಮತ್ತಷ್ಟು ತೀವ್ರ ಕಾನೂನು ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಚಿಂತನೆ ನಡೆಸಿದೆ.

ಕೇವಲ ಡ್ರಗ್ಸ್ ಸೇವನೆ, ಮಾರಾಟಗಾರರಿಗೆ ಮಾತ್ರವಲ್ಲದೆ ಇಂತಹ ಸಮಾಜ ವಿರೋಧಿ ಚಟುವಟಿಕೆಗಳನ್ನು ನಡೆಸಲು ಕುಮ್ಮಕ್ಕು, ಪ್ರಚೋದನೆ ನೀಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಚಿಂತನೆ ನಡೆಸುತ್ತಿದೆ. ಈ ಸಂಬಂಧ ರಾಜ್ಯ ಸರ್ಕಾರ ಕಾಯ್ದೆಗಳನ್ನು ರೂಪಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಕಾನೂನು ಶಾಲೆಯ ಸಹಕಾರ ಕೇಳಿದೆ.

ಆ ಮೂಲಕ ಮಾದಕ ವಸ್ತುಗಳ ದಂಧೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಎಲ್ಲರ ಮೇಲೆಯೂ ಕಠಿಣ ಕಾನೂನು ಕ್ರಮ ಜರಗಿಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಯಪ್ರವೃತ್ತವಾಗಿದೆ. ಇದಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಕಾನೂನು ಶಾಲೆ ಮತ್ತು ಸರ್ಕಾರದ ಅಡ್ವೊಕೇಟ್ ಜನರಲ್ ಜೊತೆಗೂ ಚರ್ಚೆ ನಡೆಸಲಾಗಿದೆ. ಈ ಸಂಬಂಧ ಕಾಯ್ದೆಗಳ ಕರಡು ಸಲ್ಲಿಕೆಯಾದ ತಕ್ಷಣ ಸರ್ಕಾರ ಅದನ್ನು ವಿಮರ್ಶೆಗೆ ಒಳಪಡಿಸಿ ಜಾರಿಗೊಳಿಸುವ ನಿಟ್ಟಿನಲ್ಲಿ ಚಿಂತನೆ ನಡೆಸುತ್ತಿದೆ.

- Advertisement -

Related news

error: Content is protected !!