Friday, April 19, 2024
spot_imgspot_img
spot_imgspot_img

ಡ್ರಗ್ಸ್ ಜಾಲದಲ್ಲಿ ಬಾಲಿವುಡ್ ನಟ ಸಹಿತ ಇಬ್ಬರು‌ ಆರೋಪಿಗಳ ಬಂಧನ.! ಮಂಗಳೂರು ಸಿಸಿಬಿ ಪೊಲೀಸ್ ರ ಕಾರ್ಯಚರಣೆ.

- Advertisement -G L Acharya panikkar
- Advertisement -

ಮಂಗಳೂರು: ಮಂಗಳೂರು ಸಿಸಿಬಿ ಪೋಲಿಸರು, ಇಕಾನಾಮಿಕ್ &ನಾರ್ಕೋಟಿಕ್ ಠಾಣೆಯ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಇಂದು ಬೆಳಗಿನ ಜಾವ ಬಾಲಿವುಡ್ ನಟ ಸೇರಿ ಇಬ್ಬರು‌ ಆರೋಪಿಗಳನ್ನು ಬಂಧಿಸಿದ ಘಟನೆ ನಗರದ ಕದ್ರಿ ಪದವು ಪರಿಸರದಲ್ಲಿ ನಡೆದಿದೆ.

ಮಂಗಳೂರು ಸುರತ್ಕಲ್ ಕಾನ ನಿವಾಸಿ ಅಕೀಲ್ ನೌಶೀಲ್ (28), ಕುಳಾಯಿ ನಿವಾಸಿ ಕಿಶೋರ್ ಅಮನ್ ಶೆಟ್ಟಿ(30) ಬಂಧಿತ ಆರೋಪಿಗಳು. ಆರೋಪಗಳಿಂದ ನಿಷೇಧಿತ ಮಾದಕ ವಸ್ತು ಎಂಡಿಎಂಎ  ಪೌಡರ್,ಬೈಕ್,2 ಮೊಬೈಲ್ ಫೋನ್ ಸೇರಿದಂತೆ 1 ಲಕ್ಷ ಮೌಲ್ಯದ ವಸ್ತು ವಶಪಡಿಸಿಕೊಳ್ಳಲಾಗಿದೆ.

ಆರೋಪಿ ಅಕೀಲ್ ನೌಶೀಲ್ ಈ ಹಿಂದೆ ವಿದೇಶದಲ್ಲಿ ಸೇಫ್ಟಿ ಆಫೀಸರ್ ಆಗಿದ್ದ ಹಾಗೂ ಕಿಶೋರ್ ಅಮನ್ ಶೆಟ್ಟಿ ನಟ ಡ್ಯಾನ್ಸರ್,ಕೋರಿಯೋಗ್ರಾಫರ್ ಆಗಿ ಕೆಲಸ ಮಾಡಿಕೊಂಡಿದ್ದ . ಬೆಂಗಳೂರು, ಮುಂಬೈಯಿಂದ ಮಾದಕ ವಸ್ತುಗಳನ್ನು ತಂದು ಮಾರಾಟ ಮಾಡುತಿದ್ದರು.

ಈ ಪ್ರಕರಣದಲ್ಲಿ ಇನ್ನು ಕೆಲ ಆರೋಪಿಗಳಿದ್ದಾರೆ ಮತ್ತು ಇವರ ಚೈನ್ ಲಿಂಕ್ ಬಗ್ಗೆ ಸಂಪೂರ್ಣ ತನಿಖೆ ನಡೆಸುತ್ತಿದ್ದೇವೆ.ಮುಂಬೈಯಿಂದ ವಸ್ತುಗಳನ್ನು ಖರೀದಿಸಿ ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು.ಇಬ್ಬರ ಮೇಲೆ ಸೇವನೆ ಮತ್ತು ಮಾರಾಟ ಎರಡು ಪ್ರಕರಣ ದಾಖಲಿಸಿದ್ದೇವೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಮಾಹಿತಿ ನೀಡಿದ್ದಾರೆ.

- Advertisement -

Related news

error: Content is protected !!