Sunday, June 21, 2026
spot_imgspot_img
spot_imgspot_img

ಬೆಳ್ತಂಗಡಿ: ಅಕ್ರಮ ಗಾಂಜಾ ಸಾಗಾಟ; ಇಬ್ಬರು ಪೊಲೀಸ್ ವಶಕ್ಕೆ

- Advertisement -
- Advertisement -

ಬೆಳ್ತಂಗಡಿ : ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಬೆಳ್ತಂಗಡಿ ಠಾಣೆ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಗಳನ್ನು ಮದ್ದಡ್ಕದ ಚಿಲಿಂಬಿ ನಿವಾಸಿ ಮುಹಮ್ಮದ್ ರಫೀಕ್ (35) ಮತ್ತು ಆಲಂದಿಲ ನಿವಾಸಿ ನೌಫಲ್ (25) ಎಂದು ಗುರುತಿಸಲಾಗಿದೆ.

ಬೆಳ್ತಂಗಡಿ ಎಸ್‌ಐ ನಂದಕುಮಾರ್ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿಯ ಸಬರಬೈಲು ಎಂಬಲ್ಲಿ ಶುಕ್ರವಾ ಸಂಜೆ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಮದ್ದಡ್ಕ ಕಡೆಯಿಂದ ಬೆಳ್ತಂಗಡಿ ಕಡೆಗೆ ದ್ವಿಚಕ್ರ ವಾಹನದಲ್ಲಿ ಇಬ್ಬರು ಯುವಕರು ಬರುತ್ತಿದ್ದರು. ಸಂಶಯಗೊಂಡು ವಾಹನ ತಡೆದು ತಪಾಸಣೆ ನಡೆಸಿದ ವೇಳೆ ಗಾಂಜಾ ಸಾಗಾಟ ಪ್ರಕರಣ ಬೆಳಕಿಗೆ ಬಂದಿದೆ. ಸ್ಕೂಟರ್‌ನಲ್ಲಿ 1.5 ಕೆ.ಜಿ ಗಾಂಜಾ ಪತ್ತೆಯಾಗಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

- Advertisement -

Related news

error: Content is protected !!