Monday, July 20, 2026
spot_imgspot_img
spot_imgspot_img

ಬಂಟ್ವಾಳ:ನಿಷೇಧಿತ ಎಂ.ಡಿ.ಎಂ.ಎ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ

- Advertisement -
- Advertisement -

ರೂ 42,30,000 /- ಮೌಲ್ಯದ ಎಂ.ಡಿ.ಎಂ.ಎ ಪತ್ತೆ

ಬಂಟ್ವಾಳ: ನಿಷೇಧಿತ ಮಾದಕ ವಸ್ತುವಾದ ಎಂ.ಡಿ.ಎಂ.ಎ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದು, ಲಕ್ಷಾಂತರ ಮೌಲ್ಯದ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.

ಪೊಲೀಸ್‌ ಉಪ ನಿರೀಕ್ಷಕರಾದ ಮಂಜುನಾಥ ಟಿ ಅವರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ, ಸಿಬ್ಬಂದಿಗಳೊಂದಿಗೆ ಮಂಚಿ ಗ್ರಾಮದ ಪಂಜಾಲ ಕ್ರಾಸ್ ಬಳಿ ಮೇ 2ರಂದು ಸಂಜೆ ದಾಳಿ ನಡೆಸಲಾಯಿತು. ಈ ವೇಳೆ KA-20-Z-9585 ಸಂಖ್ಯೆಯ ಬೊಲೆರೋ ವಾಹನವನ್ನು ತಡೆದು ಪರಿಶೀಲಿಸಿದಾಗ, ವಾಹನದಲ್ಲಿದ್ದ ಇಬ್ಬರು ವ್ಯಕ್ತಿಗಳನ್ನು ವಿಚಾರಣೆ ನಡೆಸಿದಾಗ, ಆರೋಪಿಗಳು ಬೊಳಂತೂರು ನಿವಾಸಿಗಳಾದ ಮೊಹಮ್ಮದ್ ನಿಜಾಮುದ್ದೀನ್ (30) ಹಾಗೂ ಆತನ ಸಹೋದರ ಮೊಹಮ್ಮದ್ ಶಾಹೀಂ (19) ಎಂದು ತಿಳಿದುಬಂದಿದೆ.

ಆರೋಪಿಗಳು ಬೆಂಗಳೂರಿನಲ್ಲಿ ಅಪರಿಚಿತ ನೈಜೀರಿಯಾದ ವ್ಯಕ್ತಿಯಿಂದ ಎಂ.ಡಿ.ಎಂ.ಎ ಖರೀದಿಸಿ ಮಾರಾಟಕ್ಕೆ ಸಾಗಿಸುತ್ತಿದ್ದುದಾಗಿ ಒಪ್ಪಿಕೊಂಡಿದ್ದಾರೆ.ತಪಾಸಣೆ ವೇಳೆ ಆರೋಪಿಗಳಿಂದ ಸುಮಾರು 423 ಗ್ರಾಂ ತೂಕದ ರೂ 42,30,000 ಮೌಲ್ಯದ ಎಂ.ಡಿ.ಎಂ.ಎ ಪತ್ತೆಯಾಗಿದೆ. ಜೊತೆಗೆ, ಅವರ ಬಳಿಯಿದ್ದ ಮೂರು ಮೊಬೈಲ್ ಫೋನ್‌ಗಳು ಹಾಗೂ ಕೃತ್ಯಕ್ಕೆ ಬಳಸಿದ ಬೊಲೆರೋ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 46,25,000 ಎಂದು ಅಂದಾಜಿಸಲಾಗಿದೆ.

ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 68/2026, ಕಲಂ: 8(C) r/w 20(b)(ii)(C) NARCOTIC DRUGS AND PSYCHOTROPIC SUBSTANCES ACT 1985 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!