Saturday, June 28, 2025
spot_imgspot_img
spot_imgspot_img

ಕಾರ್ಕಳ ಯುವತಿಯ ಅತ್ಯಾಚಾರ ಪ್ರಕರಣ : ಪ್ರಮುಖ ಆರೋಪಿಗೆ ಡ್ರಗ್ಸ್‌ ಪೂರೈಸಿದ್ದ ಮೂರನೇ ಆರೋಪಿ ಬಂಧನ

- Advertisement -
- Advertisement -

ಉಡುಪಿ ಜಿಲ್ಲೆಯ ಕಾರ್ಕಳ ಯುವತಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಈಗಾಗಲೇ ಎರಡು ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಮುಖ ಆರೋಪಿಗೆ ಡ್ರಗ್ಸ್‌ ಪೂರೈಸಿದ್ದ ಮೂರನೇ ಆರೋಪಿ ಅಭಯ್(23) ಕಾರ್ಕಳ ಎಂಬಾತನನ್ನು ಬಂಧಿಸಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್, ಅಭಯ್ ಎಂಬಾತನು ಪ್ರಥಮ ಆರೋಪಿ ಅಲ್ತಾಫ್ ಗೆ ಮಾದಕ ವಸ್ತು ಕೊಟ್ಟಿದ್ದಾನೆ ಎಂದು ನಮಗೆ ಪ್ರಥಮವಾಗಿ ತನಿಖೆಯಲ್ಲಿ ಕಂಡುಬಂದಿರುತ್ತದೆ

ಕೃತ್ಯ ಎಸಗಿದ ಮೇಲೆ, ಪ್ರಮುಖ ಆರೋಪಿ ತಪ್ಪಿಸಿಕೊಳ್ಳಲು ಸಹಕಾರ ಮಾಡುವುದಕ್ಕೆ ಪ್ರಯತ್ನ ಪಟ್ಟಿದ್ದು, ಆತನನ್ನು ಬಂಧಿಸಲಾಗಿದೆ. ನಾಳೆ ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಕಸ್ಟಡಿಗೆ ಪಡೆದುಕೊಂಡು, ಆತನನ್ನು ಸಂಪೂರ್ಣ ತನಿಖೆ ನಡೆಸಿ, ಮುಂದೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

- Advertisement -

Related news

error: Content is protected !!