Saturday, August 8, 2026
spot_imgspot_img
spot_imgspot_img

ಬೆಂಗಳೂರಲ್ಲಿ 9 ಕೋಟಿ‌ ಮೌಲ್ಯದ ಡ್ರಗ್ಸ್ ಜಪ್ತಿ: ಮೂವರು ಅರೆಸ್ಟ್‌

- Advertisement -
- Advertisement -

ಬೆಂಗಳೂರು: ನಗರದಲ್ಲಿ ಡಿಆರ್‌ಐ ಅಧಿಕಾರಿಗಳು ನಡೆಸಿದ ಭರ್ಜರಿ ಕಾರ್ಯಾಚರಣೆಯೊಂದರಲ್ಲಿ ಸುಮಾರು 9 ಕೋಟಿ ಮೌಲ್ಯದ ಡ್ರಗ್ಸ್‌ ವಶಪಡಿಸಿಕೊಂಡಿದ್ದಾರೆ.

ನಾಯಿಗೆ ನೀಡುವ ಫುಡ್‌ ಪ್ಯಾಕೇಟ್‌ನಲ್ಲಿಟ್ಟು ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ದೆಹಲಿಯಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ ವೇಳೆ ಡ್ರಗ್ಸ್‌ ವಶಪಡಿಸಿಕೊಳ್ಳಲಾಗಿದೆ. ಡ್ರಗ್ಸ್ ಸಾಗಾಟ ಮಾಡುತ್ತಿದ್ದ ಆರೋಪಿ ಹಾಗೂ ಆತನ ಸಂಪರ್ಕದಲ್ಲಿದ್ದ ಮತ್ತಿಬ್ಬರನ್ನೂ ಅಧಿಕಾರಿಗಳು ಬಂಧಿಸಿದ್ದಾರೆ.

ಹೆಚ್ಚಿನ ವಿಚಾರಣೆ ನಡೆಸಿದಾಗ ಬೆಂಗಳೂರಿನಲ್ಲಿ ಮನೆಯಲ್ಲಿ 40 ಡೆಬಿಟ್ ಕಾರ್ಡ್, 70 ಕ್ಕೂ ಹೆಚ್ಚು ಸಿಮ್ ಕಾರ್ಡ್‌ಗಳನ್ನೂ ವಶಕ್ಕೆ ಪಡೆದುಕೊಂಡಿದ್ದಾರೆ. ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ವರದಿ ಮೂಲಕ ತಿಳಿದು ಬಂದಿದೆ.

- Advertisement -

Related news

error: Content is protected !!