- Advertisement -
- Advertisement -



ಮಂಗಳೂರು: ಪಂಪ್‌ವೆಲ್ ಬಳಿಯ ಗೂಡಂಗಡಿಯೊಂದರಲ್ಲಿ ಗಾಂಜಾ ಮಿಶ್ರಿತ ಚಾಕಲೇಟ್‌ಗಳನ್ನು ಮಾರಾಟ ಮಾಡುತ್ತಿದ್ದಾನೆ ಎಂಬ ಆರೋಪದ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಉತ್ತರ ಪ್ರದೇಶ ಮೂಲದ ಸುಜಿತ್ ಕುಮಾರ್ ಎಂದು ಗುರುತಿಸಲಾಗಿದೆ.
ಪಂಪ್‌ವೆಲ್ ಬಳಿಯ ಪಾನ್ ಅಂಗಡಿಯಲ್ಲಿ ಗಾಂಜಾ ಎಲೆಗಳ ವಾಸನೆಯುಳ್ಳ ಚಾಕ್‌ಲೇಟ್‌ಗಳನ್ನು ಮಾರಾಟ ಮಾಡುತ್ತಿದ್ದಾನೆಂಬ ಆರೋಪ ಕೇಳಿ ಬಂದ ಬಳಿಕ ಅಬಕಾರಿ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದರು. ಈ ಸಂದರ್ಭಆರೋಪಿ ಸುಜಿತ್ ಮಾದಕ ದ್ರವ್ಯ ಮಿಶ್ರಿತ ಚಾಕಲೇಟ್‌ಗಳನ್ನು ಮಾರಾಟ ಮಾಡುವ ಉದ್ದೇಶದಿಂದ ಗೂಡಂಗಡಿಯಲ್ಲಿ ದಾಸ್ತಾನಿಡಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
- Advertisement -








