Sunday, July 26, 2026
spot_imgspot_img
spot_imgspot_img

ಐದೂವರೆ ಕೋಟಿ ರೂ. ಮೌಲ್ಯದ ಮಾದಕ ವಸ್ತು ಪ್ರಕರಣ; ಬೆಳ್ತಂಗಡಿಯ ಹೀರೋ, ಆಂಬುಲೆನ್ಸ್ ಚಾಲಕ ಜಲೀಲ್ ಬಾಬಾ ವಿರುದ್ಧ ಪ್ರಕರಣ ದಾಖಲು..!

- Advertisement -
- Advertisement -

ಬೆಳ್ತಂಗಡಿ : ಬಾಗಲಕೋಟೆಯಲ್ಲಿ ಇತ್ತೀಚೆಗೆ ಪತ್ತೆಯಾದ ಐದೂವರೆ ಕೋಟಿ ರೂ. ಮೌಲ್ಯದ ಮಾದಕ ಎಂಡಿಎಂಎ ವಶಪಡಿಸಿಕೊಂಡ ಪ್ರಕರಣದಲ್ಲಿ ಈಗಾಗಲೇ ನಾಲ್ವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಬೆಳ್ತಂಗಡಿಯ ಅಂಬುಲೆನ್ಸ್‌ ಚಾಲಕ ಜಲೀಲ್ ಬಾಬಾ ವಿರುದ್ಧ ಪ್ರಕರಣ ದಾಖಲಾಗಿದೆ.

ಜಲೀಲ್ ಬಾಬಾ ಎಂಬಾತ ಆಂಬುಲೆನ್ಸ್ ಡ್ರಗ್ಸ್ ಇಟ್ಟುಕೊಂಡು, ಸಮಾಜ ಸೇವೆಯ ಮುಖವಾಡ ಧರಿಸಿದ್ದ. ಆತನನ್ನು ಜನ ಬೆಳ್ತಂಗಡಿಯ ಹೀರೋ ಎಂದು ಕರೆಯುತ್ತಿದ್ದರು. ಆದರೆ, ಆಂಬುಲೆನ್ಸ್‌ನಲ್ಲಿ ಆತ ಮಾದಕವಸ್ತು ಸರಬರಾಜು ಮಾಡುತ್ತಿರುವುದು ಈಗ ಬಹಿರಂಗವಾಗಿದೆ.

ಪ್ರಕರಣದಲ್ಲಿ ಈಗಾಗಲೇ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಮೊಹಮ್ಮದ್ ಅಲ್ತಾಫ್ (28), ಉಜಿರೆ ಹಳೆಪೇಟೆಯ ಮೊಹಮ್ಮದ್ ಮುಸ್ತಫಾ (28), ಇಂದಬೆಟ್ಟು ಗ್ರಾಮದ ದೇವನಾರಿ ನಿವಾಸಿ ಅಲ್ಪಾಜ್ ಮತ್ತು ಅಣ್ಣಪ್ಪ ಸ್ವಾಮಿ ಅಲಿಯಾಸ್ ಮನು ಎಂಬವರ ವಿರುದ್ದ ದೂರು ದಾಖಲಿಸಿಕೊಳ್ಳಲಾಗಿದೆ. ಈ ಪೈಕಿ ಅಣ್ಣಪ್ಪ ಸ್ವಾಮಿ ಎಂಬವನನ್ನು ಆರಂಭದಲ್ಲೇ ಜೈಲಿಗಟ್ಟಲಾಗಿದ್ದು, ಉಳಿದ ಆರೋಪಿಗಳ ವಿರುದ್ಧವೂ ಕ್ರಮ ಜರುಗಿಸಲಾಗಿದೆ.

ಈ ಪ್ರಕರಣದ ತನಿಖೆ ವೇಳೆ ಮಾದಕ ವಸ್ತು ಪೂರೈಕೆ ಜಾಲದ ಬಗ್ಗೆ ಮಾಹಿತಿ ಪಡೆದ ಪೊಲೀಸರು, ದೆಹಲಿಯಿಂದ ಎಂಡಿಎಂಎ ಖರೀದಿಸಿಕೊಂಡು ಬೆಂಗಳೂರಿಗೆ ಸಾಗಿಸುತ್ತಿದ್ದ ಜಾಲದ ಬಗ್ಗೆ ಸುಳಿವು ಪಡೆದಿದ್ದು, ಜುಲೈ 15 ರಂದು ಬಾಗಲಕೋಟೆ ಜಿಲ್ಲೆಯ ಹುನಗುಂದ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ರಾಯಲ್ ಇನ್ ಲಾಡ್ಜ್ ಮೇಲೆ ದಾಳಿ ನಡೆಸಿ ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಳಿಕ ಅವರಿಂದ ಅಂದಾಜು ಐದೂವರೆ ಕೋಟಿ ರೂ. ಮೌಲ್ಯದ ಒಟ್ಟು 5ಕೆ.ಜಿ 196 ಗ್ರಾಂ ಎಂಡಿಎಂಎ, ಕಾರು, ಬ್ಯಾಗ್ ಮತ್ತು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ತನಿಖೆಯಲ್ಲಿ, ಆರೋಪಿಗಳು ಕಾರಿನ ಮೂಲಕ ದೆಹಲಿಯಿಂದ ಎಂಡಿಎಂಎ ತಂದು, ಬೆಂಗಳೂರನ್ನು ಕೇಂದ್ರವಾಗಿಸಿಕೊಂಡು ದಕ್ಷಿಣ ಕನ್ನಡ, ಉಡುಪಿ ಹಾಗೂ ಕೇರಳದ ವಿವಿಧ ಭಾಗಗಳಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದರು ಎಂದು ತಿಳಿದು ಬಂದಿದ್ದು, ಈ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆಯಲ್ಲಿ, ತನಿಖೆ ಮುಂದುವರಿದಿತ್ತು. ಇದೀಗ ಬೆಳ್ತಂಗಡಿಯ ಅಂಬುಲೆನ್ಸ್ ಚಾಲಕ ಜಲೀಲ್ ಬಾಬಾ ಭಾಗಿಯಾಗಿರುವುದು ತಿಳಿದುಬಂದಿದೆ.

ಜಲೀಲ್ ಬಾಬಾ ಕಳೆದ 6 ದಿನಗಳಿಂದ ತಲೆಮರೆಸಿಕೊಂಡಿದ್ದು, ಮೊಬೈಲ್ ಪೋನ್ ಸ್ವಿಚ್ ಆಫ್ ಮಾಡಲಾಗಿದ್ದು, ತುರ್ತು ಅಂಬುಲೆನ್ಸ್ ಕರೆಯನ್ನೂ ಸ್ವೀಕರಿಸುತ್ತಿಲ್ಲ. ಆತನ ಪತ್ತೆಗಾಗಿ ಜಿಲ್ಲಾ ಪೊಲೀಸ್ ಎಸ್.ಪಿ ಮತ್ತು ಕಮಿಷನ‌ರ್ ಅವರ ಮಾರ್ಗದರ್ಶನದ ತಂಡ ಕಾರ್ಯಾಚರಣೆ ಆರಂಭಿಸಿದೆ ಎಂದು ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!