Sunday, May 19, 2024
spot_imgspot_img
spot_imgspot_img

ಕುಡಿದ ಮತ್ತಿನಲ್ಲಿ ಗಲಾಟೆ; ತಲೆ ಮೇಲೆ‌ ಕಲ್ಲು ಎತ್ತಿ ಹಾಕಿ ಸ್ನೇಹಿತನ ಕೊಲೆ..!

- Advertisement -G L Acharya panikkar
- Advertisement -

ಕುಡಿದ ಮತ್ತಿನಲ್ಲಿ ಸ್ನೇಹಿತರೇ ತಮ್ಮ ಗೆಳೆಯನ ತಲೆ ಮೇಲೆ‌ ಕಲ್ಲು ಎತ್ತಿ ಹಾಕಿ, ದೊಣ್ಣೆಯಿಂದ ಹೊಡೆದು ಭೀಕರವಾಗಿ ಕೊಲೆ ‌ಮಾಡಿರುವ ಘಟನೆ ಚಿತ್ರದುರ್ಗ ಕವಾಡಿಗರಹಟ್ಟಿಯಲ್ಲಿ ನಡೆದಿದೆ.

ಕೊಲೆಯಾದ ವ್ಯಕ್ತಿ ಕವಾಡಿಗರಹಟ್ಟಿಯ ಸತೀಶ್ ಎಂದು ಗುರುತಿಸಲಾಗಿದೆ.

ಗ್ರಾಮದ ಆಂಜನೇಯ ದೇವಸ್ಥಾನದ ನಾಗರಕಟ್ಟೆ ಬಳಿ ಸತೀಶ್​​ ಶವ ಪತ್ತೆಯಾದ ಹಿನ್ನೆಲೆಯಲ್ಲಿ ಘಟನಾ ಸ್ಥಳಕ್ಕೆ ಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈಗಾಗಲೇ ಘಟನೆ ಸಂಬಂಧ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಕೊಲೆ‌ ಮಾಡಿದವರಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಮೃತ ಸತೀಶ್ ಕುಟುಂಬಸ್ಥರು ಆಗ್ರಹಿಸಿದ್ದಾರೆ.

- Advertisement -

Related news

error: Content is protected !!