Sunday, June 21, 2026
spot_imgspot_img
spot_imgspot_img

ದುಬೈಯಿಂದ ಮಂಗಳೂರಿಗೆ ಅಕ್ರಮ ಚಿನ್ನ ಮತ್ತು ವಿದೇಶಿ ಸಿಗರೇಟ್ ಸಾಗಿಸುತ್ತಿದ್ದ ಮಹಿಳೆಯ ಬಂಧನ

- Advertisement -
- Advertisement -

ಮಂಗಳೂರು: ದುಬೈಯಿಂದ ಮಂಗಳೂರಿಗೆ ಅಕ್ರಮವಾಗಿ ಚಿನ್ನ ಮತ್ತು ವಿದೇಶಿ ಸಿಗರೇಟ್ ಗಳನ್ನು ಸಾಗಿಸುತ್ತಿದ್ದ ಮಹಿಳೆಯನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದು, ಆಕೆಯಿಂದ ಕೋಟ್ಯಂತರ ರೂ. ಮೌಲ್ಯದ ಚಿನ್ನ ಮತ್ತು ವಿದೇಶಿ ಸಿಗರೇಟ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕಾಸರಗೋಡು ಮೂಲದ ಮುಹಮ್ಮದ್ ಅಲಿ ಸಮೀರಾ ಬಂಧಿತ ಮಹಿಳೆ.ಈಕೆ ದುಬಾಯಿಂದ ಆಗಮಿಸಿದ ಏರ್ ಇಂಡಿಯಾ ವಿಮಾನದಲ್ಲಿ ಮಂಗಳೂರಿಗೆ ಬಂದಿಳಿದಿದ್ದು, ತನ್ನ ಒಳ ಉಡುಪು, ಸ್ಯಾನಿಟರಿ ಪ್ಯಾಡ್, ಸಾಕ್ಸ್ ನಲ್ಲಿ ಚಿನ್ನವನ್ನು ಸಾಗಿಸುತ್ತಿದ್ದಳು.ಮಹಿಳೆಯಿಂದ 1.10 ಕೋಟಿ ರೂ ಮೌಲ್ಯದ 2.41 kg ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.

- Advertisement -

Related news

error: Content is protected !!