ವರದಿ: ನ್ಯೂಸ್ ಡೆಸ್ಕ್, ವಿ ಟಿವಿ
ಉತ್ತರಪ್ರದೇಶದಲ್ಲಿ ಎಂಟು ಪೊಲೀಸರನ್ನು ಹತ್ಯೆಗೈದ ಗ್ಯಾಂಗ್ ಸ್ಟರ್ ವಿಕಾಸ್ ದುಬೆಯನ್ನು ಎನ್ ಕೌಂಟರ್ ಮಾಡಲಾಗಿದೆ. ಇಂದು ಬೆಳಿಗ್ಗೆ ಕಾನ್ಪುರದಲ್ಲಿ ನಡೆದ ಕಾರು ಅಘಾತದ ವೇಳೆ ಎಸ್ಕೇಪ್ ಆಗಲು ಯತ್ನಿಸಿದ ದುಬೆ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಈ ವೇಳೆ ಆತ ಸಾವನ್ನಪ್ಪಿದ್ದಾನೆ.
ಗುರುವಾರ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದ ಬಂಧಿತ ಆರೋಪಿ ವಿಕಾಸ್ ದುಬೆಯನ್ನು ಮಧ್ಯಪ್ರದೇಶ ಉಜ್ಜಯಿನಿಯಿಂದ ಉತ್ತರ ಪ್ರದೇಶ್ ಶಿವ್ಲಿಗೆ ವಿಚಾರಣೆಗಾಗಿ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಕಾನ್ಪುರ ಸಮೀಪ ಟೋಲ್ ಪ್ಲಾಜಾ ಕ್ರಾಸ್ ಮಾಡಿದ ಬಳಿಕ ಕಾರು ಪಲ್ಟಿಯಾಗಿತ್ತು. ಈ ವೇಳೆ ಆರೋಪಿ ಎಸ್ಕೇಪ್ ಆಗಲು ಯತ್ನಿಸಿದ್ದಾನೆ.
ಮುನ್ನೆಚ್ಚರಿಕೆ ಕ್ರಮವಾಗಿ ಕೂಡಲೇ ಪೊಲೀಸರು ಆತನ ಮೇಲೆ ಗುಂಡು ಹಾರಿಸಿದ್ದಾರೆ. ಈ ವೇಳೆ ಆತ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ದುಬೆ ವಿರುದ್ಧ 60 ಪ್ರಕರಣ:
ಯುಪಿಯಲ್ಲಿ ರಾಜನಾಥ್ ಸಿಂಗ್ ಅವರ ಸರ್ಕಾರವಿದ್ದಾಗ ಆಗಿನ ಮಂತ್ರಿಯಾಗಿದ್ದ ಸಂತೋಷ್ ಶುಕ್ಲಾ ಹತ್ಯೆ ಕೇಸ್ ನಲ್ಲೂ ಈತ ಭಾಗಿಯಾಗಿದ್ದ. 60 ಪ್ರಕರಣದ ಆರೋಪಿ ಗ್ಯಾಂಗ್ ಸ್ಟರ್ ವಿಕಾಸ್ ದುಬೆಯನ್ನು ಅರೆಸ್ಟ್ ಮಾಡಲು ಜುಲೈ 2ರಂದು ದಿಕ್ರು ಗ್ರಾಮಕ್ಕೆ ತೆರಳಿತ್ತು. ವಿಕಾಸ್ ಅವಿತಿದ್ದ ಮನೆಮೇಲೆ ಪೊಲೀಸರು ತಲುಪುತ್ತಿದ್ದಂತೆ ಟೆರೇಸ್ ಮೇಲಿಂದ 8-10 ಮಂದಿ ಆರೋಪಿಗಳು ಗುಂಡಿನ ದಾಳಿ ನಡೆಸಿದ್ದರು. ಘಟನೆಯಿಂದ ಶಿವರಾಜ್ ಪುರ ಠಾಣಾಧಿಕಾರಿ ಮಹೇಶ್ ಯಾದವ್, ಸಬ್ ಇನ್ಸ್ ಪೆಕ್ಟರ್ , 5 ಕಾನ್ಸ್ ಟೇಬರ್ ಸೇರಿ ಮತ್ತೋರ್ವ ಸ್ಥಳದಲ್ಲೇ ಮೃತಪಟ್ಟಿದ್ದರು.