Saturday, April 27, 2024
spot_imgspot_img
spot_imgspot_img

ಪಾಕಿಸ್ತಾನದಲ್ಲಿ ಬಾಂಬ್‌ ಸ್ಫೋಟ ; 39 ಮಂದಿ ಸಾವು

- Advertisement -G L Acharya panikkar
- Advertisement -

ಪಾಕಿಸ್ತಾನ ಅಫ್ಘಾನಿಸ್ತಾನ ಗಡಿಯ ಸಮೀಪವಿರುವ ಖಾರ್ ಪಟ್ಟಣದ ರಾಜಕೀಯ ಕಾರ್ಯಕ್ರಮದಲ್ಲಿ ಬಾಂಬ್‌ ಸ್ಫೋಟಗೊಂಡಿದ್ದರಿಂದ 39 ಮಂದಿ ಸಾವನ್ನಪ್ಪಿದ್ದಾರೆ. 200ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಜಮಿಯತ್ ಉಲೇಮಾ-ಎ-ಇಸ್ಲಾಂ-ಎಫ್ ರಾಜಕೀಯ ಪಕ್ಷದ ಕಾರ್ಯಕ್ರಮ ನಡೆಯುತ್ತಿದ್ದು,  400ಕ್ಕೂ ಹೆಚ್ಚು ಮಂದಿ ಭಾಗಿಯಾಗಿದ್ದರು. ಈ ದಾಳಿಯಲ್ಲಿ ಸ್ಥಳೀಯ ಜೆಯುಎಲ್‌-ಎಫ್‌ ನಾಯಕ ಮೃತಪಟ್ಟಿದ್ದಾರೆ.

ಈ ಕುರಿತು ಖೈಬರ್ ಪಖ್ತುಂಕ್ವಾ ಪ್ರಾಂತ್ಯದ ಆರೋಗ್ಯ ಸಚಿವ ರಿಯಾಜ್ ಅನ್ವರ್ ಮಾಹಿತಿ ನೀಡಿದ್ದಾರೆ. ಆಸ್ಪತ್ರೆಯಲ್ಲಿ 39 ಮೃತ ದೇಹಗಳಿದ್ದು, 123 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ 17 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿದ್ದಾರೆ.

- Advertisement -

Related news

error: Content is protected !!