Sunday, June 14, 2026
spot_imgspot_img
spot_imgspot_img

ರಾಮನಗರದಲ್ಲಿ ಬಾಂಬ್ ಸ್ಫೋಟ ; ಯುವಕ ಗಂಭೀರ

- Advertisement -
- Advertisement -

ರಾಮನಗರ ಜಿಲ್ಲೆಯ ಹೊರವಲಯದ ಮನೆಯೊಂದರಲ್ಲಿ ಕಚ್ಚಾ ಬಾಂಬ್ ಸ್ಫೋಟಗೊಂಡು 27 ವರ್ಷದ ವ್ಯಕ್ತಿಯೊಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ನಿನ್ನೆ ನಡೆದಿದೆ.

ರಾಮನಗರ ಜಿಲ್ಲೆಯ ಹಾರೋಬೆಲೆ ಗ್ರಾಮದ ಸಚಿನ್ ಕುಮಾರ್ ಎಂಬಾತ ತನ್ನ ಮನೆಯಲ್ಲಿ ಕಚ್ಚಾ ಬಾಂಬ್ ತಯಾರಿಸಿ ಸಂಗ್ರಹಿಸುತ್ತಿದ್ದರು. ಕಚ್ಚಾ ಬಾಂಬ್‌ಗಳನ್ನು ಕಾಡು ಹಂದಿಗಳನ್ನು ಬೇಟೆಯಾಡಲು ಬಳಸಲಾಗುತ್ತಿತ್ತು ಎಂದು ತಿಳಿದುಬಂದಿದೆ. ಆಗಸ್ಟ್ 3 ರಂದು ಬಾಂಬ್ ಸ್ಫೋಟಗೊಂಡಾಗ ಸಚಿನ್ ಅವರ ಮುಖ ಮತ್ತು ಕೈಗಳಿಗೆ ತೀವ್ರ ಗಾಯಗೊಂಡಿದ್ದಾರೆ.

ಸ್ಫೋಟದ ನಂತರ ಸಚಿನ್ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಚಿನ್ ವಿರುದ್ಧ ಸಾತನೂರು ಪೊಲೀಸ್ ಠಾಣೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆ 1959ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸಚಿನ್ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!