




ಸೆಪ್ಟೆಂಬರ್ 7ರವರೆಗೆ ಕೇರಳದ ಬಹುತೇಕ ಸ್ಥಳಗಳಲ್ಲಿ ಗುಡುಗು ಮತ್ತು ಮಿಂಚುಗಳೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇತ್ತ ಕರ್ನಾಟಕದಲ್ಲೂ ಸೆ. 12ರವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೇರಳದಲ್ಲಿ ಈ ವರ್ಷವೂ ಭಾರೀ ಪ್ರವಾಹ ಮತ್ತು ಭೂಕುಸಿತ ಉಂಟಾಗಿದ ಹಿನ್ನೆಲೆಯಲ್ಲಿ ಈಗಾಗಲೇ ಹಲವು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರವರೆಗೂ ಕೇರಳದಲ್ಲಿ ಭಾರೀ ಮಳೆ ಮುಂದುವರೆಯಲಿದೆ. ಈ ಹಿನ್ನೆಲೆಯಲ್ಲಿ ಹವಮಾನ ಇಲಾಖೆ ಪಥನಾಂತಿಟ್ಟ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಘೋಷಿಸಿದೆ.
ಅಲಪ್ಪುಳ, ಕೊಟ್ಟಾಯಂ, ಎರ್ನಾಕುಲಂ ಜಿಲ್ಲೆಗಳಿಗೆ ಇನ್ನೆರಡು ದಿನ ಹಳದಿ ಅಲರ್ಟ್ ಘೋಷಿಸಲಾಗಿದೆ. ಸೆಪ್ಟೆಂಬರ್ 5ರಂದು ಪಥನಾಂತಿಟ್ಟ, ಅಲಪ್ಪುಳ, ಕೊಟ್ಟಾಯಂ, ಇಡುಕ್ಕಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಮುಂದುವರೆಯಲಿದೆ. ಸೆಪ್ಟೆಂಬರ್ 6ರಂದು ಎರ್ನಾಕುಲಂ, ಇಡುಕ್ಕಿಯಲ್ಲಿ ಮಳೆಯಾಗಲಿದೆ. ಸೆಪ್ಟೆಂಬರ್ 7ರಂದು ಅಲಪ್ಪುಳ, ಎರ್ನಾಕುಲಂ, ತ್ರಿಶೂರ್, ಮಲಪ್ಪುರಂ, ಕೋಯಿಕ್ಕೋಡ್, ಕಣ್ಣೂರು ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ.