Wednesday, May 1, 2024
spot_imgspot_img
spot_imgspot_img

ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯತನದಿಂದ ಕಾಡಾನೆ ಸಾವು..!

- Advertisement -G L Acharya panikkar
- Advertisement -

ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಡಾನೆ ಮೃತಪಟ್ಟಿರುವ ಆರೋಪ ಕೇಳಿಬಂದಿದೆ. ಮೂಡಿಗೆರೆ ಅರಣ್ಯ ವಲಯದ ವ್ಯಾಪ್ತಿಯಲ್ಲಿರುವ ಭೈರಾಪುರ ಸಮೀಪದ ಮೇಕನಗದ್ದೆಯಲ್ಲಿ ಅರಣ್ಯ ಇಲಾಖೆ ಶನಿವಾರ ಮಧ್ಯರಾತ್ರಿ ಕಾಡಾನೆ ಸೆರೆ ಕಾರ್ಯಾಚರಣೆ ನಡೆಸಿದೆ. ಹೀಗಾಗಿ ಅಧಿಕಾರಿಗಳು ಕಾಡಾನೆಗೆ ಅರವಳಿಕೆ‌ ನೀಡಿದ್ದಾರೆ. ಈ ಅರವಳಿಕೆ ಮಂಪರಿನಲ್ಲಿ ಆನೆ ಗುಡ್ಡದಿಂದ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಮೃತಪಟ್ಟಿರುವ ಕಾಡಾನೆ ಕೆಲ ದಿನಗಳ ಹಿಂದೆ ನಡೆದಿದ್ದ ಕಾರ್ಯಾಚರಣೆಯಲ್ಲಿ ಇಟಿಫ್​ ಸಿಬ್ಬಂದಿ ಕಾರ್ತಿಕ್ ಮೇಲೆ ದಾಳಿ ಮಾಡಿತ್ತು. ಕಾಡಾನೆ ದಾಳಿಗೆ ಕಾರ್ತಿಕ್ ಮೃತಪಟ್ಟಿದ್ದರು. ಹೀಗಾಗಿ ಕಾಡಾನೆ ಸೆರೆಗೆ ರಾಜ್ಯ ಸರ್ಕಾರ ಅನುಮತಿ ನೀಡಿತ್ತು. ಹೀಗಾಗಿ ಶನಿವಾರ ನಡೆದ ಕಾರ್ಯಚರಣೆಯಲ್ಲಿ ಅವಘಡ ಸಂಭವಿಸಿದೆ.

- Advertisement -

Related news

error: Content is protected !!