Friday, May 3, 2024
spot_imgspot_img
spot_imgspot_img

ಗೃಹ ಜ್ಯೋತಿ ಮತ್ತು ಗೃಹ ಲಕ್ಷ್ಮೀ ಯೋಜನೆಯ ನಕಲಿ ಅಪ್ಲಿಕೇಶನ್‌; ಪೊಲೀಸ್ ಇಲಾಖೆ ಎಚ್ಚರಿಕೆ

- Advertisement -G L Acharya panikkar
- Advertisement -

ಕರ್ನಾಟಕ ಸರಕಾರದ ಉಚಿತ ಯೋಜನೆಗಳಾದ ಗೃಹ ಜ್ಯೋತಿ ಮತ್ತು ಗೃಹ ಲಕ್ಷ್ಮೀ ಯೋಜನೆ ಬಗ್ಗೆ ಸಾರ್ವಜನಿಕ ಜಾಲತಾಣ ಗಳಲ್ಲಿ ನಕಲಿ ಅಪ್ಲಿಕೇಷನ್‌ಗಳು ಕಾರ್ಯಾಚರಿಸುತ್ತಿದ್ದು, ಈ ಬಗ್ಗೆ ಜಾಗೃತೆ ವಹಿಸುವಂತೆ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ.

ಈ ರೀತಿಯ ನಕಲಿ ಅಪ್ಲಿಕೇಷನ್‌ಗಳನ್ನು ಸಾರ್ವಜನಿಕರು ತಮ್ಮ ಮೊಬೈಲ್ ನಲ್ಲಿ ಇನ್‌ಸ್ಟಾಲ್ ಮಾಡಿಕೊಳ್ಳಬಾರದು ಮತ್ತು ಸೈಬರ್ ಕಳ್ಳರು ಮೆಸೇಜ್ ಮೂಲಕ ಹಾಗೂ ವಾಟ್ಸಾಪ್ ಮೂಲಕ ಈ ಬಗ್ಗೆ ನೀಡುವ ಯಾವುದೇ ಲಿಂಕ್‌ನ್ನು ಬಳಸಬಾರದು ಎಂದು ಪೊಲೀಸ್ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ಈ ರೀತಿಯಾದ ಲಿಂಕ್ ಕ್ಲಿಕ್ ಮಾಡಿದಾಗ ನಿಮ್ಮ ವೈಯಕ್ತಿಕ ಮಾಹಿತಿಗಳು ಸೋರಿಕೆಯಾಗಬಹುದು. ಯಾವುದೇ ಹೆಲ್ತ್‌ ಡೆಸ್ಕ್‌ನಿಂದ ಕರೆ ಮಾಡಿ ನೀವು ಈ ಯೋಜನೆಗೆ ಆಯ್ಕೆಯಾಗಿದ್ದೀರಿ, ನಿಮ್ಮ ವೈಯುಕ್ತಿಕ ವಿವರಗಳನ್ನು ನೀಡುವಂತೆ ತಿಳಿಸಿದ್ದಲ್ಲಿ ಕೂಡ ಯಾವುದೇ ಮಾಹಿತಿ ನೀಡಬಾರದು.ಸಾರ್ವಜನಿಕರು ಇಂತಹ ನಕಲಿ ಅಪ್ಲಿಕೇಷನ್ ಗಳ ಮೂಲಕ ತಮ್ಮ ವೈಯಕ್ತಿಕ ಆಧಾರ್, ಪ್ಯಾನ್ ಕಾರ್ಡ್‌ ಮಾಹಿತಿ ನೀಡಿ ಮೋಸ ಹೋಗಬಾರದು.

ಈ ಯೋಜನೆಗಳಿಗೆ ಸಂಬಂಧಿಸಿದಂತೆ ಸರಕಾರವು ಇದುವರೆಗೂ ಯಾವುದೇ ಅಂಡ್ರಾಯ್ಡ್ ಅಪ್ಲಿಕೇಷನ್ ಅನ್ನು ಬಿಡುಗಡೆ ಮಾಡಿರುವುದಿಲ್ಲ. ಈ ಯೋಜನೆಗಳ ನೋಂದಣಿಗಾಗಿ ಸೇವಾ ಸಿಂಧು ಪೋರ್ಟಲ್‌ಗೆ ಭೇಟಿ ನೀಡಬೇಕು ಎಂದು ಪೊಲೀಸ್‌ ಇಲಾಖೆ ತಿಳಿಸಿದ್ದಾರೆ.

- Advertisement -

Related news

error: Content is protected !!