Monday, July 27, 2026
spot_imgspot_img
spot_imgspot_img

ಗುಜರಾತ್ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ – ಎಲ್ಲಾ 15 ಪುರಸಭೆಗಳಲ್ಲಿ ಬಿಜೆಪಿ ಗೆಲುವು

- Advertisement -
- Advertisement -

ಅಹ್ಮದಾಬಾದ್: ಗುಜರಾತ್ ನಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತ ಎಣಿಕೆ ಮುಂದುವರಿದಿದ್ದು, ಬಿಜೆಪಿ ಎಲ್ಲಾ 15 ಪುರಸಭೆಗಳಲ್ಲಿ ಗೆಲುವನ್ನು ಸಾಧಿಸುವ ಮೂಲಕ ರಾಜ್ಯದಲ್ಲಿ ತನ್ನ ಬಲವನ್ನು ಹೆಚ್ಚಿಸಿಕೊಂಡಿದೆ.ಕಾಂಗ್ರೆಸ್ ಸಾಧನೆ ಶೂನ್ಯವಾಗಿದೆ.ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಭರ್ಜರಿ ಗೆಲುವಿನ ಹಿನ್ನೆಲೆ ಗುಜರಾತ್‌ನಲ್ಲಿ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ ನಡೆಯುತ್ತಿದೆ. ನವಸಾರಿ ಮುನ್ಸಿಪಲ್ ಕಾರ್ಪೊರೇಷನ್‌ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ 52 ಸ್ಥಾನಗಳಲ್ಲಿ 50 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ 2 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಂಡಿದೆ.

ಗುಜರಾತ್‌ನ 15 ಪುರಸಭೆಯ ಒಟ್ಟು 1,044 ಸ್ಥಾನಗಳಲ್ಲಿ, ಇಲ್ಲಿಯವರೆಗೆ 493 ಸ್ಥಾನಗಳ ಫಲಿತಾಂಶಗಳನ್ನು ಘೋಷಿಸಲಾಗಿದೆ. ರಾಜ್ಯ ಚುನಾವಣಾ ಆಯೋಗದ ಮಾಹಿತಿಯ ಪ್ರಕಾರ, ಬಿಜೆಪಿ 467 ಸ್ಥಾನಗಳನ್ನು ಗೆದ್ದಿದೆ, ಕಾಂಗ್ರೆಸ್ 22 ಸ್ಥಾನಗಳನ್ನು ಮತ್ತು ಇತರರು 4 ಸ್ಥಾನಗಳನ್ನು ಗೆಲುವನ್ನು ಸಾಧಿಸಿದ್ದಾರೆ.

- Advertisement -

Related news

error: Content is protected !!