Saturday, June 28, 2025
spot_imgspot_img
spot_imgspot_img

ಹಾಸನದಲ್ಲಿ ಹಾಡಹಗಲೇ ಗುಂಡಿನ ದಾಳಿ; ವ್ಯಕ್ತಿಯ ಹತ್ಯೆ ಮಾಡಿ ಮತ್ತೋರ್ವ ಆತ್ಮಹತ್ಯೆ..!

- Advertisement -
- Advertisement -

ಹಾಸನ: ಹಾಡಹಗಲೇ ಗುಂಡಿಕ್ಕಿ ಇಬ್ಬರ ಹತ್ಯೆಯಾದ ಘಟನೆ ಹಾಸನದ ಹೊಯ್ಸಳ‌ ನಗರ ಬಡಾವಣೆಯಲ್ಲಿ ಗುರುವಾರ ಫೈರಿಂಗ್ ನಡೆದಿದೆ.

ಗುಂಡಿಕ್ಕಿ ಇಬ್ಬರನ್ನು ಹತ್ಯೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಒಬ್ಬರನ್ನು ಕಾರಿನಲ್ಲಿ ಹತ್ಯೆ ಮಾಡಲಾಗಿದ್ದು, ಕಾರಿನ ಬಳಿ ಮತ್ತೊಬ್ಬರ ಕೊಲೆಯಾಗಿದೆ. ಆಸ್ತಿ ವಿಚಾರಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಎಸ್​ಪಿ ಮೊಹಮ್ಮದ್ ಸುಜೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆರಳಚ್ಚು ತಜ್ಞರು, ಎಫ್​ಎಸ್​​ಎಲ್​ ತಜ್ಞರಿಂದ ಪರಿಶೀಲನೆ ನಡೆಸಲಾಗಿದೆ. ಹಾಸನದ ಕೆಆರ್ ಪುರಂ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಆರೋಪಿಗಳ ಪತ್ತೆ ಪೊಲೀಸರು ಮುಂದಾಗಿದ್ದಾರೆ.

ಘಟನೆ ಬಗ್ಗೆ ಮಾಹಿತಿ ನೀಡಿದ ಹಾಸನ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ, ಓರ್ವ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿ ಮತ್ತೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇಂದು ಮಧ್ಯಾಹ್ನ 12.30ರ ಸುಮಾರಿಗೆ ಘಟನೆ ಸಂಭವಿಸಿದೆ ಎಂದು ತಿಳಿಸಿದರು.

- Advertisement -

Related news

error: Content is protected !!