Tuesday, May 7, 2024
spot_imgspot_img
spot_imgspot_img

ಪುತ್ತೂರು: ಬಿಜೆಪಿ ನಾಯಕರ ಒತ್ತಡವೇ ಹಲ್ಲೆಗೆ ಕಾರಣ; ಪೊಲೀಸರಿಗೆ ಕರೆ ಮಾಡಿ ಒತ್ತಡ ಹಾಕಿದವರ ಹೆಸರನ್ನು ಎರಡು ದಿನಗಳಲ್ಲಿ ಬಹಿರಂಗಪಡಿಸುವೆ- ಅಶೋಕ್‌ ರೈ

- Advertisement -G L Acharya panikkar
- Advertisement -

ಪುತ್ತೂರು: ಬಿಜೆಪಿ ನಾಯಕರ ಫೋಟೋ ಹೊಂದಿದ್ದ ಬ್ಯಾನರ್’ಗೆ ಶ್ರದ್ದಾಂಜಲಿ ಕೋರಿ, ಚಪ್ಪಲಿ ಹಾರ ಹಾಕಿದ ವಿವಾದದ ಬೆನ್ನಲ್ಲೇ ಪುತ್ತೂರು ಶಾಸಕ ಅಶೋಕ್ ರೈ ಅವರು ಬಾಸುಂಡೆ ಬರುವ ರೀತಿಯಲ್ಲಿ ಹಲ್ಲೆ ಮಾಡಲು ಅಧಿಕಾರಿಗಳಿಗೆ ಬಿಜೆಪಿ ನಾಯಕರ ಒತ್ತಡವೇ ಕಾರಣ. ಯಾರೆಲ್ಲಾ ಅಧಿಕಾರಿಗಳಿಗೆ ಕರೆ ಮಾಡಿ ಒತ್ತಡ ಹಾಕಿದ್ದಾರೋ ಅವರ ಹೆಸರನ್ನು ಎರಡು ದಿನದಲ್ಲಿ ಬಹಿರಂಗಪಡಿಸುವೆ ಎಂದಿದ್ದಾರೆ.

ಬ್ಯಾನರ್’ಗೆ ಚಪ್ಪಲಿ ಹಾರ ಹಾಕಿರುವ ಆರೋಪಿಗಳಿಗೆ ಡಿವೈಎಸ್‌ಪಿ ಕಚೇರಿಯಲ್ಲಿ ದೌರ್ಜನ್ಯ ನಡೆಯಲು, ಬಾಸುಂಡೆ ಬರುವ ರೀತಿಯಲ್ಲಿ ಹಲ್ಲೆಯಾಗಲು ಅಧಿಕಾರಿಗಳಿಗೆ ಬಿಜೆಪಿ ನಾಯಕರ ಒತ್ತಡವೇ ಕಾರಣವಾಗಿದೆ ಎಂದು ಈಗಾಗಲೇ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಯಾರೆಲ್ಲಾ ಅಧಿಕಾರಿಗಳಿಗೆ ಕರೆ ಮಾಡಿ ಒತ್ತಡ ಹಾಕಿದ್ದಾರೋ ಅವರ ಹೆಸರನ್ನು ಎರಡು ದಿನದಲ್ಲಿ ಬಹಿರಂಗಪಡಿಸುವೆ ಎಂದು ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

ಮತ್ತೊಂದೆಡೆ ಬ್ಯಾನರ್ ಹಾಕಿದ ಆರೋಪಿಗಳಿಗೆ ಹಲ್ಲೆ ನಡೆಸಿದ್ದು ಕಾಂಗ್ರೆಸ್ಸಿನವರೇ ಎಂದು ಕಲ್ಲಡ್ಕ ಪ್ರಭಾಕರ್ ಭಟ್ ಆರೋಪಿಸಿದ್ದಾರೆ. ಕಲ್ಲಡ್ಕ ಪ್ರಭಾಕರ ಭಟ್ ಆರೋಪಕ್ಕೆ ಖಾರವಾಗಿಯೇ ಶಾಸಕ ಅಶೋಕ್ ರೈ ಉತ್ತರಿಸಿದ್ದಾರೆ. ನನ್ನ ಕ್ಷೇತ್ರದಲ್ಲಿ ಅನ್ಯಾಯವಾದವರಿಗೆ ನ್ಯಾಯ ಕೊಡಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಪ್ರಕರಣದ ತನಿಖೆ ನಡೆಸಿ ತಪ್ಪತಸ್ಥರ ವಿರುದ್ದ ಎಫ್‌ಐಆರ್ ದಾಖಲಿಸಿ ಅಮಾನತು ಮಾಡುವಂತೆ ಸೂಚಿಸಿದ್ದೆ ಅದರಂತೆ ತನಿಖೆ ನಡೆಸಿ ತಪ್ಪತಸ್ಥರ ವಿರುದ್ದ ಕ್ರಮ ಜರುಗಿಸಲಾಗಿದೆ ಎಂದರು.

ಅಧಿಕಾರಿಗಳ ಮೇಲೆ ಒತ್ತಡ ಹಾಕಿದವರ ಕಾಲ್ ಲಿಸ್ಟ್ ತೆಗೆದು ಅದನ್ನು ಎರಡು ದಿನದೊಳಗೆ ಬಹಿರಂಗಪಡಿಸುವೆ ಆವಾಗ ಪುತ್ತೂರಿನ ಜನತೆಗೆ ಎಲ್ಲವೂ ಗೊತ್ತಾಗಲಿದೆ ಎಂದು ಹೇಳಿದರು. ಬೆಳ್ತಂಗಡಿ ಶಾಸಕ ಹರೀಶ್‌ಪೂಂಜರವರು ಪುತ್ತೂರಿಗೆ ಬಂದು ಈ ವಿಚಾರದಲ್ಲಿ ಮತನಾಡುವ ಅಗತ್ಯವಿಲ್ಲ. ನನ್ನ ಕ್ಷೇತ್ರದಲ್ಲಿ ಆಗಿರುವ ಘಟನೆಗೆ ನ್ಯಾಯ ಕೊಡಿಸುವ ಶಕ್ತಿ ನನಗಿದೆ ಎಂದು ಹೇಳಿದರು.

- Advertisement -

Related news

error: Content is protected !!