ಕೋಲ್ಕತ್ತಾ: ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ದಾಳಿ ನಡೆಸಿದೆ.
ಸರ್ಕಾರಿ ಸಂಸ್ಥೆಯಲ್ಲಿ ನಡೆದ ಆರ್ಥಿಕ ಹಗರಣದ ಭಾಗವಾಗಿ ಇಡಿ ದಾಳಿ ನಡೆಸಿದೆ. ಸಂದೀಪ್ ಘೋಷ್ ಅವರು ಪ್ರಾಂಶುಪಾಲರಾಗಿದ್ದ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ನಡೆದ ಆರೋಪದ ಹಣಕಾಸು ಅಕ್ರಮಗಳ ಕುರಿತು ಕೇಂದ್ರೀಯ ಸಂಸ್ಥೆಗಳ ತನಿಖೆಗೆ ಕಾರಣವಾಯಿತು. ಹಣಕಾಸು ಅಕ್ರಮಗಳ ಕುರಿತು ಸಂದೀಪ್ ಘೋಷ್ ವಿರುದ್ಧ ಸಿಬಿಐ ತನಿಖೆ ನಡೆಸುವಂತೆ ಕೋಲ್ಕತ್ತಾ ಹೈಕೋರ್ಟ್ ಆದೇಶಿಸಿತ್ತು. ಈ ತೀರ್ಪನ್ನು ಘೋಷ್ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದರು.
ಘೋಷ್ ಸಲ್ಲಿಸಿರುವ ಈ ಅರ್ಜಿ ವಿಚಾರಣೆಯು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠದ ಮುಂದೆ ಇಂದು ನಡೆಯಲಿದೆ. ಇನ್ನು ಕೋಲ್ಕತ್ತಾ ನ್ಯಾಯಾಲಯವು ಸೆಪ್ಟೆಂಬರ್ 3ರಂದು ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ಹಣಕಾಸು ಅವ್ಯವಹಾರದ ಬಗ್ಗೆ ನಡೆಯುತ್ತಿರುವ ತನಿಖೆಯ ಭಾಗವಾಗಿ ಘೋಷ್ ಮತ್ತು ಇತರ ಮೂವರನ್ನು 8 ದಿನಗಳ ಕಾಲ ಸಿಬಿಐ ಕಸ್ಟಡಿಗೆ ಒಪ್ಪಿಸಿತ್ತು.