Tuesday, July 21, 2026
spot_imgspot_img
spot_imgspot_img

ಕಾಂಗ್ರೆಸ್ ಶಾಸಕ ಹ್ಯಾರಿಸ್ ಮನೆಗೆ ಇ.ಡಿ ದಾಳಿ!

- Advertisement -
- Advertisement -

ಬೆಂಗಳೂರು: ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರಿಸ್‌ಗೆ ಇ.ಡಿ ಶಾಕ್ ಕೊಟ್ಟಿದ್ದು, ಶಾಸಕರ ಮನೆ ಸೇರಿದಂತೆ 17 ಸ್ಥಳಗಳಲ್ಲಿ ಇ.ಡಿ ದಾಳಿ ನಡೆಸಿದೆ.

ಹ್ಯಾರಿಸ್ ಬಿಡಿಎ ಅಧ್ಯಕ್ಷರೂ ಆಗಿದ್ದಾರೆ. ಇವರ ಪುತ್ರ ಮೊಹಮ್ಮದ್ ನಲಪಾಡ್ ಕಾಂಗ್ರೆಸ್ ಯುವ ಮುಖಂಡ. ಇವರ ಮನೆ ಮೇಲೆ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆಗೆ ಒಳಪಡಿಸಲಾಗಿದೆ.

ಬಿಟ್‌ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದ್ದು, ಹ್ಯಾಕರ್ ಶ್ರೀಕಿ ಜೊತೆಯಲ್ಲಿ ಆರ್ಥಿಕ ಸಂಬಂಧ ಹೊಂದಿದ್ದ ಹಿನ್ನೆಲೆಯಲ್ಲಿ ಇ.ಡಿ ರೇಡ್ ಮಾಡಿದೆ. ಶ್ರೀಕಿ ಜೊತೆ ನಲಪಾಡ್ ಆರ್ಥಿಕ ವ್ಯವಹಾರ ಇಟ್ಟುಕೊಂಡಿದ್ದರು.

ಶ್ರೀಕಿ ಜೊತೆ ನಲಪಾಡ್ 6 ವರ್ಷದ ಆರ್ಥಿಕ ವ್ಯವಹಾರ ಹೊಂದಿದ್ದರು. ಇಬ್ಬರೂ ಸೇರಿ 4.5 ಕೋಟಿ ರೂ. ವಹಿವಾಟು ನಡೆಸಿದ್ದರು ಎಂಬುದಾಗಿ ಮೂಲಗಳಿಂದ ತಿಳಿದುಬಂದಿದೆ.

- Advertisement -

Related news

error: Content is protected !!