Sunday, June 14, 2026
spot_imgspot_img
spot_imgspot_img

ಗೃಹ ಸಚಿವ ಪರಮೇಶ್ವರ್ ಒಡೆತನದ ಸಂಸ್ಥೆಗಳ ಮೇಲೆ ಇಡಿ ದಾಳಿ

- Advertisement -
- Advertisement -

ಬೆಂಗಳೂರು: ಗೃಹ ಸಚಿವ ಪರಮೇಶ್ವರ್ ಒಡೆತನದ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ದಾಳಿ ನಡೆಸುವ ಮೂಲಕ ಶಾಕ್ ನೀಡಿದೆ.

ತುಮಕೂರಿನಲ್ಲಿರುವ ಸಿದ್ಧಾರ್ಥ ಮೆಡಿಕಲ್, ಇಂಜಿನಿಯರಿಂಗ್ ಕಾಲೇಜು ಅಲ್ಲದೇ ನೆಲಮಂಗಲದ ಟಿ ಬೇಗೂರು ಬಳಿ ಇರುವ ಕಾಲೇಜು ಮೇಲೂ ಇಡಿ ದಾಳಿ ನಡೆದಿದೆ.

9 ಕಾರುಗಳಲ್ಲಿ ಬಂದಿರುವ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ನಾಲ್ಕು ವರ್ಷದ ಹಿಂದೆ ದಾಳಿ ನಡೆಸಿದ್ದ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು. ಈ ದಾಳಿ ಸಂದರ್ಭದಲ್ಲಿ ಕೋಟ್ಯಂತರ ರೂ. ಹಣ ವಶಕ್ಕೆ ಪಡೆಯಲಾಗಿತ್ತು. ಆಗ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾಗಿತ್ತು.

- Advertisement -

Related news

error: Content is protected !!