Saturday, April 27, 2024
spot_imgspot_img
spot_imgspot_img

ಸರ್ಕಾರಿ ಶಾಲಾ ಕಾಲೇಜು ಬೋಧಕರಿಗೆ ವಾರದಲ್ಲಿ ಕನಿಷ್ಟ 12 ಅವಧಿ ಬೋಧನೆ ಕಡ್ಡಾಯ

- Advertisement -G L Acharya panikkar
- Advertisement -

ಬೆಂಗಳೂರು: ವಾರದಲ್ಲಿ ಕಡ್ಡಾಯವಾಗಿ ಕನಿಷ್ಟ 12 ಅವಧಿ ಬೋಧನೆ ಮಾಡುವಂತೆ ಶಿಕ್ಷಣ ಇಲಾಖೆ ಆದೇಶಿಸಿದೆ.

ಸರ್ಕಾರಿ ಪ್ರೌಢಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮುಖ್ಯ ಶಿಕ್ಷಕರು ಮತ್ತು ಸರ್ಕಾರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಉಪ ಪ್ರಾಂಶುಪಾಲರು ವಾರದಲ್ಲಿ 12 ಅವಧಿ ಪಾಠ ಮಾಡುವುದು ಕಡ್ಡಾಯ ಎಂದು ಶಿಕ್ಷಣ ಇಲಾಖೆ ತನ್ನ ಆದೇಶದಲ್ಲಿ ತಿಳಿಸಿದೆ.

ಶಿಕ್ಷಕರು ಮಕ್ಕಳ ಕಲಿಕಾ ಗುಣಮಟ್ಟ ಹೆಚ್ಚಿಸುವಲ್ಲಿ ಶ್ರಮವಹಿಸಬೇಕಾಗುತ್ತದೆ ಎಂದು ಶಿಕ್ಷಣ ಇಲಾಖೆ ಹೇಳಿದೆ. ಈ ಅಂಶಗಳನ್ನು ಕಟ್ಟುನಿಟ್ಟಾಗಿ ಅನುಸರಿಸಿದರೆ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ ಹಾಗೂ ಫಲಿತಾಂಶವು ಉತ್ತಮವಾಗಿರುತ್ತದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ಹೇಳಿದ್ದಾರೆ.

ಸರ್ಕಾರದ ಆದೇಶದಂತೆ ಎಲ್ಲಾ ಶಾಲೆಯ ಮುಖ್ಯ ಶಿಕ್ಷಕರುಗಳು ಕೂಡ ಪ್ರತಿವಾರ 12 ಅವಧಿಗಳ ಬೋಧನೆಯನ್ನು ಕಡ್ಡಾಯವಾಗಿ ಮಾಡತಕ್ಕದ್ದು, ತರಗತಿ ತೆಗೆದುಕೊಂಡ ವರದಿಯನ್ನು ಪ್ರತಿ ತಿಂಗಳು ತಮ್ಮ ವ್ಯಾಪ್ತಿಯ ಬಿಇಒ ಮತ್ತು ಬಿ ಆರ್ ಸಿ ಗಳಿಗೆ ಕಳುಹಿಸಿಕೊಡತಕ್ಕದ್ದು ಎಂದು ವಿ.ಅನ್ಬುಕುಮಾರ್ ತಿಳಿಸಿದ್ದಾರೆ.

ಈ ವೇಳೆ ಪ್ರಸ್ತುತ ಶೈಕ್ಷಣಿಕ ಸಾಲಿನಲ್ಲಿ ಖಾಸಗಿ ಅನುದಾನರಹಿತ ಶಾಲಾ ಕಾಲೇಜುಗಳ ಶುಲ್ಕಗಳ ಕುರಿತ ಪೋಷಕರ ತಕರಾರುಗಳ ಪರಿಹಾರಕ್ಕೆ ಅಧಿಕಾರಯುಕ್ತ ಸಮಿತಿಗಳನ್ನು ರಚಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

- Advertisement -

Related news

error: Content is protected !!