Tuesday, March 18, 2025
spot_imgspot_img
spot_imgspot_img

ಆನ್ ಲೈನ್ ತರಗತಿ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ: “ಸುರೇಶ್ ಕುಮಾರ್”

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಶಾಲಾ-ಕಾಲೇಜುಗಳ ಪ್ರಾರಂಭ ಮತ್ತು ಆನ್ ಲೈನ್ ತರಗತಿಗಳ ಬಗ್ಗೆ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಶಾಲಾ-ಕಾಲೇಜು ಆರಂಭ ಹಾಗೂ ಆನ್ ಲೈನ್ ಶಿಕ್ಷಣ ಬಗ್ಗೆ ವಿದ್ಯಾರ್ಥಿಗಳಲ್ಲಿ ಗೊಂದಲ ಉಂಟಾಗಿದೆ. ಹೀಗಾಗಿ ಬಗ್ಗೆ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಪೋಸ್ಟ್ ಹಾಕಿ ಸ್ಪಷ್ಟನೆ ನೀಡಿದ್ದಾರೆ.

ಇದನ್ನು ನಾನು ಹಲವಾರು ಬಾರಿ ಸ್ಪಷ್ಟಪಡಿಸಿದ್ದೇನೆ. ಸರ್ಕಾರ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಣಯಗಳನ್ನು ವಿದ್ಯಾರ್ಥಿಗಳು ಮತ್ತು ವಿದ್ಯಾರ್ಜನೆಯ ಪರ ಕೈಗೊಳ್ಳಲು ಸಮರ್ಥವಾಗಿದೆ. ಅಂಥ ನಿರ್ಣಯಗಳನ್ನು ಕೈಗೊಳ್ಳುತ್ತದೆ. ಪಾಲಕರು, ಪೋಷಕರು ಮತ್ತು ವಿದ್ಯಾರ್ಥಿಗಳು ಈ ಕುರಿತು ಯಾವುದೇ ಆತಂಕ ಅಥವಾ ಕಪೋಲ ಕಲ್ಪಿತ ಸುಳ್ಳು ಸುದ್ದಿಗಳಿಗೆ ಕಿವಿ ಕೊಡಬೇಡಿ. ಸರ್ಕಾರ ತಾನಾಗಿಯೇ ಯಾವುದೇ ನಿರ್ಣಯ ಅಧಿಕೃತವಾಗಿ ಪ್ರಕಟಿಸುವ ಮುನ್ನ ಯಾವುದೇ ಸುದ್ದಿಯನ್ನು ನಿಜ ಎಂದು ನಂಬಬೇಡಿ ಮನವಿ ಮಾಡಿದ್ದಾರೆ.

ತಜ್ಞರ ಸಮಿತಿ ವರದಿ ಅಥವಾ ಬೇರೆ ಬೇರೆ ಆಯಾಮಗಳಲ್ಲಿ ಸರ್ಕಾರದ ಹಂತದಲ್ಲಿ ನಡೆಯುವ ಚರ್ಚೆಗಳು ಎಂದಿಗೂ ಅಂತಿಮ ನಿರ್ಣಯವಾಗಲು ಸಾಧ್ಯವಿಲ್ಲ ತಿಳಿಸಿದ್ದಾರೆ.

- Advertisement -

Related news

error: Content is protected !!