Thursday, June 4, 2026
spot_imgspot_img
spot_imgspot_img

ವೃದ್ಧ ದಂಪತಿಯ ಕೈಕಾಲು ಕಟ್ಟಿ 8 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

- Advertisement -
- Advertisement -

ದಾವಣಗೆರೆ: ಐವರು ಮುಸುಕುಧಾರಿಗಳು ವೃದ್ಧ ದಂಪತಿಯ ಕೈಕಾಲು ಕಟ್ಟಿ 8.40 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದರೋಡೆ ಮಾಡಿದ ಘಟನೆ ಚನ್ನಗಿರಿ ತಾಲೂಕಿನ ಕಾಕನೂರ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಸಾವಿತ್ರಮ್ಮ (60) ಹಾಗೂ ಮಾದಪ್ಪ (62) ಎಂಬವರ ಮೇಲೆ ದರೋಡೆಕೋರರು ಹಲ್ಲೆ ನಡೆಸಿದ್ದಾರೆ. ಬಳಿಕ ಅವರ ಕೈಕಾಲು ಕಟ್ಟಿ, ಚಿನ್ನಾಭರಣ ದರೋಡೆ ಮಾಡಿದ್ದಾರೆ. ಬಳಿಕ ಅಲ್ಲಿಂದ ಕಳ್ಳರು ಪರಾರಿಯಾಗಿದ್ದಾರೆ.

ಸ್ಥಳದಲ್ಲಿ ಸಂತೆಬೆನ್ನೂರು ಠಾಣೆಯ ಪೊಲೀಸರು ಹಾಗೂ ಶ್ವಾನದಳದಿಂದ ಪರಿಶೀಲನೆ ನಡೆದಿದೆ. ದರೋಡೆ ಗ್ಯಾಂಗ್ ಬಂಧನಕ್ಕೆ ಎಸ್‍ಪಿ ಉಮಾ ಪ್ರಶಾಂತ್ ತಂಡ ರಚಿಸಿದ್ದಾರೆ.

- Advertisement -

Related news

error: Content is protected !!