Friday, June 5, 2026
spot_imgspot_img
spot_imgspot_img

ಮಂಗಳೂರು : ಆತ್ಮಹತ್ಯೆಗೆ ಶರಣಾದ ವೃದ್ಧ ಸಹೋದರಿಯರು

- Advertisement -
- Advertisement -

ಮಂಗಳೂರು : ನಗರದ ಕದ್ರಿ ಕಂಬದ ಬಳಿಯ ಚಂದ್ರಿಕಾ ಬಡಾವಣೆಯಲ್ಲಿ ಒಂದೇ ಮನೆಯಲ್ಲಿ ವಾಸವಿದ್ದ ವೃದ್ಧ ಅಕ್ಕ, ತಂಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಲತಾ ಭಂಡಾರಿ(70) ಮತ್ತು ಅವರ ಅಕ್ಕ ಸುಂದರಿ ಶೆಟ್ಟಿ (80) ಮೃತ ಸೋದರಿಯರು. ಲತಾ ಭಂಡಾರಿ ಅವರ ಪತಿ ಜಗನ್ನಾಥ ಭಂಡಾರಿ ಬಾರ್ ಒಂದರಲ್ಲಿ ಕೆಲಸ ಮಾಡುತ್ತಿದ್ದು ಮಂಗಳವಾರ ಬೆಳಗ್ಗೆ ಎಂದಿನಂತೆ ಕೆಲಸಕ್ಕೆ ತೆರಳಿದ್ದರು. ಸಂಜೆ 4.30ರ ವೇಳೆಗೆ ಮನೆಗೆ ಬಂದು ನೋಡಿದಾಗ ಮನೆಯ ಬಾಗಿಲು ಬಂದ್ ಆಗಿತ್ತು. ಕಿಟಕಿಯಿಂದ ನೋಡಿದಾಗ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ.

ಇವರಿಗೆ ಮಕ್ಕಳಿರಲಿಲ್ಲ ಎನ್ನಲಾಗುತ್ತಿದ್ದು, ಕೌಟುಂಬಿಕ ವಿಚಾರದಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಮಾಹಿತಿ ಇದೆ. ಕದ್ರಿ ಪೊಲೀಸರು ಸ್ಥಳದಲ್ಲಿದ್ದು, ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!