- Advertisement -
- Advertisement -






ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ದಕ್ಷಿಣ ಕನ್ನಡ ಕ್ಷೇತ್ರದ ಮಾಜಿ ಬಿಜೆಪಿ ಸಂಸದ, ನಳೀನ್ ಕುಮಾರ್ ಕಟೀಲ್ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.
ನಿರ್ಮಲಾ ಸೀತಾರಾಮನ್, ನಳೀನ್ ಕುಮಾರ್ ಕಟೀಲ್ ಸೇರಿ ಹಲವರ ವಿರುದ್ಧ ದಾಖಲಾಗಿದ್ದ ಎಫ್ಐಆರ್ಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಅ.22 ಕ್ಕೆ ಅರ್ಜಿ ವಿಚಾರಣೆ ಮುಂದೂಡಿ ಆದೇಶ ಹೊರಡಿಸಿದೆ.
- Advertisement -