Friday, April 26, 2024
spot_imgspot_img
spot_imgspot_img

ಶಿರಾ ಮತ್ತುರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ದಿನಾಂಕ ನಿಗದಿ

- Advertisement -G L Acharya panikkar
- Advertisement -


ಶಾಸಕ ಸತ್ಯನಾರಾಯಣ ಅವರ ನಿಧನದಿಂದ ತೆರವಾಗಿದ್ದ ಶಿರಾ ಮತ್ತು ಶಾಸಕ ಮುನಿರತ್ನ ಅವರ ರಾಜೀನಾಮೆ‌ಯಿಂದ ತೆರವಾಗಿರುವ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 3 ರಂದು ಉಪ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ದಿನಾಂಕ ನಿಗದಿ ಮಾಡಿದೆ.


ಈ ಸಂಬಂಧ ಅಕ್ಟೋಬರ್ 9 ರಂದು ಅಧಿಸೂಚನೆ ಹೊರಡಿಸಲಿರುವ ಕೇಂದ್ರ ಚುನಾವಣಾ ಆಯೋಗ, ಅಕ್ಟೋಬರ್ 16 ರಂದು ನಾಮಪತ್ರ ಸಲ್ಲಿಕೆ ಕೊನೆಯ ದಿನಾಂಕವೆಂದು ತಿಳಿಸಿದೆ. ಅಕ್ಟೋಬರ್ ತಿಂಗಳ 17 ರಂದು ನಾಮಪತ್ರ ಪರಿಶೀಲನೆ ನಡೆಸಲಿರುವುದಾಗಿಯೂ ಆದೇಶದಲ್ಲಿ ತಿಳಿಸಿದೆ.
ನವೆಂಬರ್ ತಿಂಗಳ 3 ರಂದು ಎರಡೂ ಕ್ಷೇತ್ರಗಳಲ್ಲಿಯೂ ಬೈ ಎಲೆಕ್ಷನ್ ನಡೆಯಲಿದ್ದು, ನವೆಂಬರ್ 10 ರಂದು ಮತ ಎಣಿಕೆ ನಡೆಯಲಿದೆ ಎಂದೂ ಚುನಾವಣಾ ಆಯೋಗ ಈ ಸಂಬಂಧ ಮಾಹಿತಿ ನೀಡಿದೆ.

- Advertisement -

Related news

error: Content is protected !!