Saturday, June 20, 2026
spot_imgspot_img
spot_imgspot_img

ಉಪರಾಷ್ಟ್ರಪತಿ ಸ್ಥಾನಕ್ಕೆ ಸೆ.9ರಂದು ಚುನಾವಣೆ..!

- Advertisement -
- Advertisement -

ನವದೆಹಲಿ: ಜಗದೀಪ್ ಧನಕರ್ ಅವರ ರಾಜೀನಾಮೆಯಿಂದ ತೆರವಾಗಿರುವ ಉಪರಾಷ್ಟ್ರಪತಿ ಸ್ಥಾನಕ್ಕೆ ಸೆಪ್ಟೆಂಬರ್ 9ರಂದು ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಆಗಸ್ಟ್ 21 ಕೊನೆಯ ದಿನಾಂಕವಾಗಿದೆ.

ಇದೇ ಆಗಸ್ಟ್ 7ರಂದು ಅಧಿಸೂಚನೆ ಪ್ರಕಟವಾಗಲಿದೆ. ಆಗಸ್ಟ್ 21ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಗಸ್ಟ್ 22ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಆಗಸ್ಟ್ 25ರ ಒಳಗೆ ನಾಮಪತ್ರ ಹಿಂಪಡೆಯಲು ಅವಕಾಶ ಇರಲಿದೆ. ಸೆಪ್ಟೆಂಬರ್ 9ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆ ವರೆಗೆ ಮತದಾನ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟವಾಗಲಿದೆ ಎಂದು ಭಾರತೀಯ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ.

ಚುನಾವಣೆಯಲ್ಲಿ, ರಾಜ್ಯಸಭೆಯ 233 ಚುನಾಯಿತ ಸಂಸದರು, ರಾಜ್ಯಸಭೆಯ 12 ನಾಮನಿರ್ದೇಶಿತ ಸಂಸದರು ಮತ್ತು ಲೋಕಸಭೆಯ 543 ಸಂಸದರು ತಮ್ಮ ಮತಗಳನ್ನು ಚಲಾಯಿಸಬಹುದು. ಈ ರೀತಿಯಾಗಿ, ಒಟ್ಟು 788 ಜನರು ಮತ ಚಲಾಯಿಸಬಹುದು.

- Advertisement -

Related news

error: Content is protected !!