Tuesday, July 1, 2025
spot_imgspot_img
spot_imgspot_img

ಪುತ್ತೂರು: ಕೆದಂಬಾಡಿ ಗ್ರಾಮ ಪಂಚಾಯತ್ ನಲ್ಲಿ ಪಕ್ಷೇತರ ಅಭ್ಯರ್ಥಿ ಪ್ರವೀಣ್ ಶೆಟ್ಟಿ ತಿಂಗಳಾಡಿ ಭರ್ಜರಿ ಗೆಲುವು

- Advertisement -
- Advertisement -

ಪುತ್ತೂರು:ಕೆದಂಬಾಡಿ ಗ್ರಾಮ ಪಂಚಾಯತ್ ನಲ್ಲಿ ಪಕ್ಷೇತರ ಅಭ್ಯರ್ಥಿ ಪ್ರವೀಣ್ ಶೆಟ್ಟಿ ತಿಂಗಳಾಡಿಯವರು ಭಾರಿ ಬಹುಮತದಿಂದ ಗೆಲುವು ಸಾಧಿಸಿದ್ದಾರೆ. ಕಳೆದ ಬಾರಿ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಆಯ್ಕೆಯಾದ ಇವರು ಬಂಡಾಯವೆದ್ದು ಕಾಂಗ್ರೆಸ್ ನ ಬೆಂಬಲದೊಂದಿಗೆ ಪಂಚಾಯತ್ ನ ಅಧ್ಯಕ್ಷರಾಗಿದ್ದರು. ಈ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು ಗೆಲುವು ಸಾಧಿಸಿದ್ದಾರೆ.

ಪುತ್ತೂರು ತಾಲೂಕಿನ ಕೆದಂಬಾಡಿ ಪಂಚಾಯಿತಿಯ ಎಲ್ಲ 10 ಸ್ಥಾನಗಳ ಫಲಿತಾಂಶ ಘೋಷಣೆಯಾಗಿದೆ.ಬಿಜೆಪಿ ಬೆಂಬಲಿತರು 7 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಬಹುಮತ ಸಾಧಿಸಿದ್ದಾರೆ. ಉಳಿದ ಮೂರು ಸ್ಥಾನಗಳ ಪೈಕಿ ಕಾಂಗ್ರೆಸ್ ಬೆಂಬಲಿತರು 2 ಸ್ಥಾನದಲ್ಲಿ ವಿಜಯ ಸಂಪಾದಿಸಿದರೇ ಒಂದು ಸ್ಥಾನ ಪಕ್ಷೇತರರ ಪಾಲಾಗಿದೆ.

- Advertisement -

Related news

error: Content is protected !!