Friday, April 19, 2024
spot_imgspot_img
spot_imgspot_img

ಫೆ.27 ರಂದು 15 ರಾಜ್ಯಗಳ 56 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ: ಆಯೋಗ ಘೋಷಣೆ

- Advertisement -G L Acharya panikkar
- Advertisement -

ಕರ್ನಾಟಕದ 4 ಸ್ಥಾನ ಸೇರಿ 15 ರಾಜ್ಯಗಳ 56 ಸ್ಥಾನಗಳಿಗೆ ಫೆ.27 ರಂದು ರಾಜ್ಯಸಭಾ ಚುನಾವಣೆ ನಡೆಸಲಾಗುವುದು ಎಂದು ಭಾರತದ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ.

ಚುನಾವಣಾ ಸ್ಪರ್ಧಿಗಳಿಗೆ ನಾಮಪತ್ರ ಸಲ್ಲಿಸಲು ಫೆ. 15 ರಂದು ಕೊನೆಯ ದಿನವಾಗಿದ್ದು, ಮತದಾನ ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ ಎಂದು ವರದಿಯಾಗಿದೆ.

ಇನ್ನು ಉತ್ತರಪ್ರದೇಶದಲ್ಲಿ 10, ಬಿಹಾರ ಮತ್ತು ಮಹಾರಾಷ್ಟ್ರದಲ್ಲಿ ತಲಾ 6, ಮಧ್ಯಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ತಲಾ 5, ಗುಜರಾತ್ ಮತ್ತು ಕರ್ನಾಟಕದಲ್ಲಿ ತಲಾ 4, ಒಡಿಶಾ, ಆಂಧ್ರಪ್ರದೇಶ ಮತ್ತು ರಾಜಸ್ಥಾನದಲ್ಲಿ ತಲಾ 3 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!