Tuesday, July 1, 2025
spot_imgspot_img
spot_imgspot_img

ವಿಧಾನಸಭೆ ಚುನಾವಣೆ: ಎಲೆಕ್ಟೊರಲ್ ಬಾಂಡ್ ಮಾರಾಟಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಕಾರ!

- Advertisement -
- Advertisement -

ನವದೆಹಲಿ: ತಮಿಳುನಾಡು ಹಾಗೂ ಪಶ್ಚಿಮಬಂಗಾಳ ರಾಜ್ಯಗಳ ವಿಧಾನಸಭೆ ಚುನಾವಣೆಗೂ ಮೊದಲು ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್‌‌‌ಗಳ ಮಾರಾಟಕ್ಕೆ ತಡೆ ನೀಡಲು ನಿರಾಕರಿಸಿದೆ.

ಎಪ್ರಿಲ್‌ 1ರಿಂದ ವಿಧಾನಸಭೆ ಚುನಾವಣೆಯ ಪೂರ್ವಭಾವಿಯಾಗಿ ಹೊಸ ಎಲೆಕ್ಟೋರಲ್‌‌ ಬಾಂಡ್‌ಗಳ ಮಾರಾಟಕ್ಕೆ ತಡೆ ನೀಡಲು ಸುಪ್ರೀಂ ನಿರಾಕರಿಸಿದೆ.

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಹಿನ್ನೆಲೆ ಎನ್‌‌ಜಿಒ ಅಸೋಸಿಯೇಷನ್‌‌ ಫಾರ್‌ ಡೆಮಾಕ್ರಟಿಕ್‌‌ ರಿಫಾರ್ಮ್ಸ್ ಚುನಾವಣಾ ಬಾಂಡ್‌‌ಗಳ ಮಾರಾಟವನ್ನು ನಿರ್ಬಂಧಿಸಲು ಮಧ್ಯಂತರ ನಿರ್ದೇಶನ ನೀಡುವಂತೆ ಕೋರಿ ಅಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯ ಮೂರ್ತಿ ಎಸ್.ಎ.ಬೊಬ್ಡೆ ಮತ್ತು ಎ.ಎಸ್.ಬೋಪಣ್ಣ ಮತ್ತು ವಿ.ರಾಮಸುಬ್ರಮಣಿಯನ್ ಅವರನ್ನೊಳಗೊಂಡ ನ್ಯಾಯಪೀಠ, ಎಡಿಆರ್‌ 2017ರ ಚುನಾವಣಾ ಬಾಂಡ್‌ ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಶೀಘ್ರವೇ ಪಟ್ಟಿ ಮಾಡಬೇಕು ಎಂದು ಎಡಿಆರ್ ಅರ್ಜಿಯಲ್ಲಿ ಮನವಿ ಮಾಡಿತ್ತು.

ಮುಂದಿನ ರಾಜ್ಯ ವಿಧಾನಸಭೆ ಚುನಾವಣೆಗೂ ಮೊದಲು ಚುನಾವಣಾ ಬಾಂಡ್‌ಗಳನ್ನು ಕೇರಳ, ಅಸ್ಸಾಂ, ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ಮಾರಾಟ ಮಾಡಿದ್ದೇ ಆದಲ್ಲಿ ರಾಜಕೀಯ ಪಕ್ಷಗಳಿಗೆ ಶೆಲ್‌ ಕಂಪೆನಿಗಳ ಮುಖೇನ ಅಕ್ರಮ ಹಣಕಾಸು ನೆರವು ಮತ್ತಷ್ಟು ಹೆಚ್ಚಲಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಶರದ್‌‌ ಎ.ಬೊಬ್ಡೆ ನೇತೃತ್ವದ ಪೀಠ, ಎಪ್ರಿಲ್‌ 1ರಿಂದ ಚುನಾವಣಾ ಬಾಂಡ್‌ಗಳ ಮಾರಾಟ ನಡೆಯಲಿದ್ದು, ಸುಪ್ರೀಂ ಕೋರ್ಟ್ ಇದಕ್ಕೆ ತಡೆ ನೀಡಲು ನಿರಾಕರಿಸಿದೆ.

- Advertisement -

Related news

error: Content is protected !!