- Advertisement -
- Advertisement -




ವಿದ್ಯುತ್ ಕಂಬಕ್ಕೆ ಬೆಂಕಿ ತಗುಲಿ ಸ್ಫೋಟಗೊಂಡ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಬೆಂಗಳೂರಿನ ಬ್ಯಾಟರಾಯನಪುರ ಕ್ಷೇತ್ರದ ರಾಜೀವ್ ಗಾಂಧಿ ನಗರದಲ್ಲಿ ನಡೆದಿದೆ.
ವಿದ್ಯುತ್ ಕಂಬದ ಫ್ಯೂಸ್ ಸ್ಫೋಟಗೊಂಡು ಪಕ್ಕದ ಶೆಡ್‌ಗಳಿಗೆ ಬೆಂಕಿ ಆವರಿಸಿದ್ದು, ಶೆಡ್‌ಗಳಲ್ಲಿ ವಲಸೆ ಕಾರ್ಮಿಕರು ವಾಸಿಸುತ್ತಿದ್ದರು. ಬೆಂಕಿ ಆವರಿಸಿದ ಸಂದರ್ಭ ಕಾರ್ಮಿಕರು ಬೆಂಕಿ ನಂದಿಸಲು ಹೋಗಿದ್ದಾರೆ. ಈ ವೇಳೆ ನಾಲ್ವರಿಗೆ ಬೆಂಕಿ ತಗುಲಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯಿಂದ ಕಾರ್ಮಿಕರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಘಟನಾ ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನ ಆಗಮಿಸಿದ್ದು, ಅಗ್ನಿಶಾಮಕ ಸಿಬ್ಬಂದಿಗಳಿಂದ ಬೆಂಕಿ ನಂದಿಸುವ ಕಾರ್ಯ ಯಶಸ್ವಿಯಾಗಿದೆ
- Advertisement -








