- Advertisement -
- Advertisement -
ಆಸ್ಪತ್ರೆಯ ನಾಮಫಲಕಕ್ಕೆ ಅಳವಡಿಸಿದ್ದ ಕಬ್ಬಣದ ಕಂಬದಲ್ಲಿ ವಿದ್ಯುತ್ ಪ್ರವಹಿಸಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಕಲಬುರ್ಗಿಯ ಕೇಂದ್ರ ಬಸ್ ನಿಲ್ದಾಣದ ಎದುರಿನ ನ್ಯೂಲೈಫ್ ಆಸ್ಪತ್ರೆ ಆವರಣದಲ್ಲಿ ನಡೆದಿದೆ.
ಮೃತರನ್ನು ಮುಹಮ್ಮದ್ ಇರ್ಷಾದ್ ಎಂದು ಗುರುತಿಸಲಾಗಿದೆ.
ಇರ್ಷಾದ್ ಅವರು ಗರ್ಭಿಣಿ ತಂಗಿಯ ಚಿಕಿತ್ಸೆಗೆಂದು ಸಹಾಪುರದಿಂದ ಕೇಂದ್ರ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ನ್ಯೂಲೈಫ್ ಆಸ್ಪತ್ರೆಗೆ ಬಂದಿದ್ದರು. ಆಸ್ಪತ್ರೆಯ ಆವರಣದಲ್ಲಿರುವ ಅದರ ನಾಮಫಲಕ ಅಳವಡಿಸಿದ್ದ ಕಬ್ಬಣದ ಕಂಬವನ್ನು ಸ್ಪರ್ಶಿಸಿದ್ದರು. ಈ ವೇಳೆ ಕಂಬದಲ್ಲಿ ವಿದ್ಯುತ್ ಪ್ರವಹಿಸಿದ್ದ ಪರಿಣಾಮ ಕುಸಿದು ಬಿದ್ದಿದ್ದರು. ತಕ್ಷಣ ಅವರನ್ನು ಆಸ್ಪತ್ರೆಯ ವೈದ್ಯರು ಪರಿಶೀಲಿಸಿದ್ದು, ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.
ಘಟನೆಗೆ ಸಂಬಂಧಿಸಿ ಅಶೋಕನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಆಸ್ಪತ್ರೆಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
- Advertisement -