Thursday, June 4, 2026
spot_imgspot_img
spot_imgspot_img

ನೆಲಕ್ಕೆ ಬಿದ್ದ ವಿದ್ಯುತ್‌ ತಂತಿ ತಗುಲಿ 8 ವರ್ಷದ ಬಾಲಕ ಸಾವು..!

- Advertisement -
- Advertisement -

ಬೀದರ್: ಧಾರಾಕಾರ ಮಳೆಗೆ ನೆಲಕ್ಕೆ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ 8 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಹುಲಸೂರು ಪಟ್ಟಣದಲ್ಲಿ ನಡೆದಿದೆ.

ಅಲಿ ಮೊಮಿನ್(8)ಮೃತ ದುರ್ವೈವಿ. ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು, ಪರಿಣಾಮ ವಿದ್ಯುತ್‌ ಕಂಬದಿಂದ ಮನೆಗೆ ನೀಡಲಾಗಿದ್ದ ಸಂಪರ್ಕ ಕಟ್‌ ಆಗಿ ವೈಯರ್‌ ನೆಲಕ್ಕೆ ಬಿದ್ದಿದೆ. ಆಟವಾಡುತ್ತಿದ್ದ ಬಾಲಕ ಕೈಯಿಂದ ವೈಯರ್‌ ಹಿಡಿದುಕೊಂಡಿದ್ದು, ಕರೆಂಟ್‌ ಶಾಕ್‌ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಚಿಕಿತ್ಸೆ ಫಲಕಾರಿಯಾಗದೇ ಬಾಲಕ ಸಾವನ್ನಪ್ಪಿದ್ದಾನೆ. ಹುಲಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆಯಾಗಿದ್ದು, ಜೆಸ್ಕಾಂ ಇಲಾಖೆಯ ಅಧಿಕಾರಿಗಳ ವಿರುದ್ಧ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ ಎಂದು ವರದಿಯಿಂದ ತಿಳಿದುಬಂದಿದೆ.

- Advertisement -

Related news

error: Content is protected !!