




ವಿಜಯನಗರ : ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದ ಅಗ್ನಿ ಅವಘಡದಲ್ಲಿ ರೈತರೊಬ್ಬರಿಗೆ ಸೇರಿದ 10 ಮೇವಿನ ಬಣವೆಗಳು ಸುಟ್ಟು ಭಸ್ಮವಾಗಿರುವ ಘಟನೆ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ದೇವರ ತಿಮ್ಲಾಪುರ ಗ್ರಾಮದಲ್ಲಿ ನಡೆದಿದೆ.

ವರದಹಳ್ಳಿ ಹನುಮಂತಪ್ಪ ಎಂಬ ರೈತನಿಗೆ ಸೇರಿದ ಮೇವಿನ ಬಣವೆಗಳು ಬೆಂಕಿಗಾಹುತಿಯಾಗಿದ್ದು, ಸುಮಾರು 2 ಲಕ್ಷ ರೂ. ಮೌಲ್ಯದ ಮೇವು ಸಂಪೂರ್ಣವಾಗಿ ನಾಶವಾಗಿದೆ ಎಂದು ತಿಳಿದುಬಂದಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ವ್ಯಾಪಿಸಿದ ಕಾರಣ, ಸ್ಥಳೀಯರು ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಈ ನಡುವೆ ಅಗ್ನಿಶಾಮಕ ದಳದ ಸಿಬ್ಬಂದಿ ಸಕಾಲಕ್ಕೆ ಸ್ಥಳಕ್ಕೆ ಆಗಮಿಸದ ಹಿನ್ನೆಲೆಯಲ್ಲಿ ಎಲ್ಲಾ ಬಣವೆಗಳು ಸುಟ್ಟು ಹೋಗಿವೆ ಎನ್ನಲಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ರೈತ ಹನುಮಂತಪ್ಪ , “ಅಗ್ನಿಶಾಮಕ ದಳದ ಸಿಬ್ಬಂದಿ ಸಮಯಕ್ಕೆ ಬಂದಿದ್ದರೆ ಮೇವಿನ ಬಣವೆಗಳನ್ನು ಉಳಿಸಬಹುದಿತ್ತು” ಎಂದು ಬೇಸರ ವ್ಯಕ್ತಪಡಿಸಿದರು.
ಘಟನೆಯಿಂದ ರೈತನಿಗೆ ಭಾರೀ ಆರ್ಥಿಕ ನಷ್ಟ ಉಂಟಾಗಿದ್ದು, ಸಂಬಂಧಿತ ಅಧಿಕಾರಿಗಳು ಪರಿಹಾರ ನೀಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.








