Sunday, June 29, 2025
spot_imgspot_img
spot_imgspot_img

ಬಂಟ್ವಾಳ: ವಿದ್ಯುತ್ ಪ್ರವಹಿಸಿ ಎಲೆಕ್ಟ್ರೀಷಿಯನ್ ಮೃತ್ಯು

- Advertisement -
- Advertisement -

ಬಂಟ್ವಾಳ : ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಎಲೆಕ್ಟ್ರೀಷಿಯನ್ ವೋರ್ವರು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ, ಉರ್ಕುಂಜ ಎಂಬಲ್ಲಿ ನಡೆದಿದೆ.

ಉಳಿ ಗ್ರಾಮದ ನೆಕ್ಕಿಲ ಪಲ್ಕೆ ನಿವಾಸಿ ದೇವದಾಸ್ (35) ಮೃತಪಟ್ಟ ದುರ್ದೈವಿ.

ವೃತ್ತಿಯಲ್ಲಿ ಎಲೆಕ್ಟ್ರೀಷಿಯನ್ ಆಗಿರುವ ದೇವದಾಸ್ ಉರ್ಕುಂಜ ಎಂಬಲ್ಲಿ ಮನೆಯೊಂದರ ವಯರಿಂಗ್ ಕೆಲಸ ಮಾಡಿ, ಮನೆಯ ಹೊರಗಡೆಯಲ್ಲಿದ್ದ ಮೈನ್ ಸ್ವಿಚ್ ಬಳಿ ಕೆಲಸ ಮಾಡುತ್ತಿರುವಾಗ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿದ್ದು, ಪರಿಣಾಮ ಕೆಳಗೆ ಬಿದ್ದು ಗಾಯಗೊಂಡಿದ್ದರು ಎನ್ನಲಾಗಿದೆ.

ತಕ್ಷಣ ಸ್ಥಳದಲ್ಲಿದ್ದವರು ಗಾಯಾಳುವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದು, ಅಲ್ಲಿನ ವೈದ್ಯರು ಪರೀಕ್ಷಿಸಿದಾಗ ದೇವದಾಸ್ ರವರು ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

- Advertisement -

Related news

error: Content is protected !!