Saturday, July 25, 2026
spot_imgspot_img
spot_imgspot_img

ಮನೆ ಮೇಲೆ ಕಾಡಾನೆ ದಾಳಿ-ದಾಳಿಯಿಂದ ಗಾಯಗೊಂಡ ವ್ಯಕ್ತಿ ಸಾವು

- Advertisement -
- Advertisement -

ಮೈಸೂರು: ಕಾಡಾನೆಯೊಂದು ಮನೆ ಮೇಲೆ ದಾಳಿ ನಡೆಸಿದ ಪರಿಣಾಮ ಇಲ್ಲಿನ ನೆಟ್ಟಕಲ್ಲಹುಂಡಿ ಗ್ರಾಮದಲ್ಲಿ ವೃದ್ಧರೊಬ್ಬರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಅವರ ಪತ್ನಿ ತೀವ್ರವಾಗಿ ಗಾಯಗೊಂಡಿದ್ದಾರೆ.ಮೃತರನ್ನು ಚಿನ್ನಪ್ಪ (61) ಎಂದು ಗುರುತಿಸಲಾಗಿದ್ದು ಗಾಯಗೊಂಡಿರುವ ಅವರನ್ನು ಕೊಟ್ಟೂರಮ್ಮ ಎಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.

ಘಟನೆ ಕುರಿತು ಬೀಚನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಶಾಸಕ ಅನಿಲ್ ಕುಮಾರ್ ಅವರು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.

- Advertisement -

Related news

error: Content is protected !!