Thursday, April 25, 2024
spot_imgspot_img
spot_imgspot_img

ಬೆಳ್ತಂಗಡಿ: ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಮದ್ಯ ಮಾರಾಟ; ಅಬಕಾರಿ ಇಲಾಖೆಯಿಂದ ದಾಳಿ- 46 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

- Advertisement -G L Acharya panikkar
- Advertisement -

ಬೆಳ್ತಂಗಡಿ: ಪಿಲ್ಯ ಗ್ರಾಮದಲ್ಲಿ ದ್ವಿಚಕ್ರ ವಾಹನವೊಂದರಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವಾಗ ಬೆಳ್ತಂಗಡಿ ಅಬಕಾರಿ ಇಲಾಖೆಯವರು ದಾಳಿ ಮಾಡಿದ ಬಗ್ಗೆ ವರದಿಯಾಗಿದೆ.

ಈ ವೇಳೆ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ವಿವಿಧ 15 ಸಾವಿರ ಲೀಟರ್ ಮದ್ಯ ಹಾಗೂ ದ್ವಿಚಕ್ರ ವಾಹನ ಸೇರಿದಂತೆ ಒಟ್ಟು ರೂ. 46 ಸಾವಿರ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ವೇಳೆ ಆರೋಪಿ ಪರಾರಿಯಾಗಿದ್ದಾನೆ. ಬೆಳ್ತಂಗಡಿ ವಲಯ ಅಬಕಾರಿ ನಿರೀಕ್ಷಕಿ ಸೌಮ್ಯಲತಾ ಎನ್, ಮುಖ್ಯ ಪೇದೆ ಸಯ್ಯದ್ ಶಬೀರ್ ಹಾಗೂ ಅಬಕಾರಿ ಪೇದೆಗಳಾದ ಭೋಜ.ಕೆ, ಶಿವಶಂಕ್ರಪ್ಪ, ರವಿಚಂದ್ರ ಬೂದಿಹಾಳ ಮತ್ತು ವಾಹನ ಚಾಲಕ ನವೀನ್ ಕುಮಾರ್ ಪಿ ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು.

- Advertisement -

Related news

error: Content is protected !!