Wednesday, June 17, 2026
spot_imgspot_img
spot_imgspot_img

ಜಮ್ಮು ಕಾಶ್ಮೀರ: ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

- Advertisement -
- Advertisement -

ಜಮ್ಮು ಕಾಶ್ಮೀರ : ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಶುಕ್ರವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್ಕೌಂಟರ್ ನಡೆದಿದೆ. ಇದರಲ್ಲಿ ಭದ್ರತಾ ಪಡೆಗಳು ಮತ್ತು ಪೋಲಿಸರು ರಾಜೌರಿಯ ಥಾನಮಂಡಿ ಅರಣ್ಯ ಪ್ರದೇಶದಲ್ಲಿ ಇಬ್ಬರು ಭಯೋತ್ಪಾದಕರನ್ನು ತಟಸ್ಥಗೊಳಿಸಿದ್ದು ಕಾರ್ಯಾಚರಣೆ ಮುಂದುವರಿದಿದೆ ಎಂದು ವರದಿಯಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆಯ 16 ನೇ ಕಾರ್ಪ್ಸ್, “ರಾಜೌರಿಯ ಥಾನಮಂಡಿ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ, ಕಾರ್ಯಾಚರಣೆ ನಡೆಯುತ್ತಿದೆ” ಎಂದು ಮಾಹಿತಿ ನೀಡಿದೆ.

ಭದ್ರತಾ ಪಡೆಗಳ ಸಿಬ್ಬಂದಿ ಶುಕ್ರವಾರ ರಾಜೌರಿ ಜಿಲ್ಲೆಯಲ್ಲಿ ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಜಿಲ್ಲೆಯ ತಾಣಮಂಡಿ ಅರಣ್ಯ ಪ್ರದೇಶದಲ್ಲಿ ಈ ಎನ್‌ಕೌಂಟರ್ ನಡೆದಿದೆ. ಒಟ್ಟು ನಾಲ್ವರು ಉಗ್ರರಿದ್ದರು. ಇವರಲ್ಲಿ ಇಬ್ಬರು ವಿದೇಶಿಗರು. ಬಹುಶಃ ಅವರು ಕಾಶ್ಮೀರ ಭಾಗದಿಂದ ಇತ್ತ ಕಡೆ ಸುಳಿದಿರಬೇಕು’ ಎಂದು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಮುಖೇಶ್ ಸಿಂಗ್ ಅವರು ತಿಳಿಸಿದರು. ಭದ್ರತಾ ಪಡೆಗಳು ಉಗ್ರರ ನೆಲೆ ಕುರಿತಂತೆ ಕಳೆದ ಒಂದು ತಿಂಗಳಿoದ ಹುಡುಕಾಟ ನಡೆಸಿತ್ತು. ಇಂದು ಅವರ ನೆಲೆ ಪತ್ತೆಯಾಗಿದ್ದು, ಗುಂಡಿನ ಚಕಮಕಿ ನಡೆಯಿತು ಎಂದು ವಿವರಿಸಿದರು.

driving
- Advertisement -

Related news

error: Content is protected !!