Monday, June 8, 2026
spot_imgspot_img
spot_imgspot_img

ಜಾರ್ಖಂಡ್‌ನಲ್ಲಿ ಎನ್‌ಕೌಂಟರ್; ಮೋಸ್ಟ್ ವಾಂಟೆಡ್ ಮಾವೋವಾದಿಯ ಹತ್ಯೆಗೈದ ಭದ್ರತಾ ಪಡೆ

- Advertisement -
- Advertisement -

ರಾಂಚಿ: ಭದ್ರತಾ ಪಡೆ ಹಾಗೂ ಮಾವೋವಾದಿಗಳ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ಮಾವೋವಾದಿಯನ್ನು ಭದ್ರತಾ ಪಡೆಗಳು ಹತ್ಯೆಗೈದಿದ್ದಾರೆ.

ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಗೋಯಿಲ್‌ಕೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಬುರ್ಜುವಾ ಬೆಟ್ಟದಲ್ಲಿ ಭಾನುವಾರ (ಸೆ.7) ಬೆಳಗ್ಗೆ ಎನ್‌ಕೌಂಟರ್ ನಡೆದಿದೆ.

ಈ ಕುರಿತು ಅಧಿಕಾರಿಗಳು ಮಾಹಿತಿ ನೀಡಿದ್ದು, ಎನ್‌ಕೌಂಟರ್ ಬಳಿಕ ನಡೆದ ಶೋಧ ಕಾರ್ಯಾಚರಣೆಯಲ್ಲಿ ಶವವೊಂದು ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಸಿಪಿಐನ (ಮಾವೋವಾದಿ) ಸ್ವಯಂ ಘೋಷಿತ ವಲಯ ಕಮಾಂಡರ್ ಅಮಿತ್ ಹನ್ಸ್ದಾ ಅಲಿಯಾಸ್ ಆಪ್ತಾನ್ ಎಂದು ಗುರುತಿಸಲಾಗಿದೆ.

ಈ ಮೊದಲು ಈ ವ್ಯಕ್ತಿಯನ್ನು ಪತ್ತೆಹಚ್ಚಿದರೆ 10 ಲಕ್ಷ ರೂ. ನೀಡುವುದಾಗಿ ಘೋಷಿಸಲಾಗಿತ್ತು. ಸದ್ಯ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

- Advertisement -

Related news

error: Content is protected !!