ವಿಜಯವಾಡ: ಇಂಜಿನಿಯರಿಂಗ್ ವಿದ್ಯಾರ್ಥಿನಿಯ ಮೇಲೆ ಸ್ವೀಟ್ ಶಾಪ್ ಮಾಲೀಕ ಅತ್ಯಾಚಾರ ಮಾಡಿರುವ ಘಟನೆ ನಡೆದಿದೆ.

ತಂಪು ಪಾನೀಯದಲ್ಲಿ ಮತ್ತು ಬರಿಸುವ ಔಷಧಿ ಬೆರೆಸಿ ಅತ್ಯಾಚಾರ ಮಾಡಲಾಗಿದೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಈ ಸಂಬಂಧ ಸಂತ್ರಸ್ತೆಯ ಪಾಲಕರು ಆರೋಪಿ ವಿರುದ್ಧ ದೂರು ದಾಖಲಿಸಿದ್ದು, ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.


ಸಂತ್ರಸ್ತೆ ಗುಂಟೂರು ಜಿಲ್ಲೆಯಲ್ಲಿ ಮೊದಲ ವರ್ಷದ ಇಂಜಿನಿಯರಿಂಗ್ ಓದುತ್ತಿದ್ದಳು. ಕರೊನಾ ಲಾಕ್ಡೌನ್ ಹಿನ್ನೆಲೆಯಲ್ಲಿ ಕಾಲೇಜು ಮುಚ್ಚಿರುವುದುರಿಂದ ಪಾಲಕರಿಗೆ ಸಹಯಾವಾಗಲೆಂದು ತಿಂಗಳು 5000 ರೂ. ಸಂಬಳಕ್ಕಾಗಿ ಸ್ವೀಟ್ ಶಾಪ್ಗೆ ಕೆಲಸಕ್ಕೆ ಸೇರಿದ್ದಳು. ಆದರೆ, ಶಾಪ್ ಓನರ್ ಇದನ್ನೇ ದುರ್ಬಳಕೆ ಮಾಡಿಕೊಂಡು ತಂಪು ಪಾನೀಯದಲ್ಲಿ ಮತ್ತು ಬರಿಸುವ ಔಷಧಿ ಬೆರೆಸಿ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಮಾಡಿದ್ದಾನೆ.



ಪ್ರಜ್ಞೆ ಬಂದ ಬಳಿಕ ಮನೆಗೆ ತೆರಳಿದ ಸಂತ್ರಸ್ತೆ ಮನೆಯವರಿಗೆ ನಡೆದ ಘಟನೆಯನ್ನು ತಿಳಿಸಿದ್ದಾಳೆ. ಇದರ ಬೆನ್ನಲ್ಲೇ ಕುಟುಂಬಸ್ಥುರು ಶಾಪ್ ಓನರ್ ವಿರುದ್ಧ ದೂರು ದಾಖಲಿಸಿದ್ದಾರೆ. ಇದೀಗ ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.









