Tuesday, July 21, 2026
spot_imgspot_img
spot_imgspot_img

ದಾವಣಗೆರೆ: ಇಂಜಿನಿಯರಿಂಗ್ ವಿದ್ಯಾರ್ಥಿನಿ ಸನ್ಯಾಸತ್ವ ಸ್ವೀಕಾರ!

- Advertisement -
- Advertisement -

ದಾವಣಗೆರೆ: ನಗರದ ಚೌಕಿಪೇಟೆಯ 26 ವರ್ಷದ ಯುವತಿಯೊಬ್ಬರು ಸಂಸಾರ ತೊರೆದು ಸನ್ಯಾಸತ್ವ ಸ್ವೀಕರಿಸಿದ್ದಾರೆ. ಮುಖೇಶ್ ಕುಮಾರ್ ಹಾಗೂ ಸುನೀತಾ ಅವರ ಪುತ್ರಿ ಆಂಚಲ್ ಕುಮಾರಿ (26) ಜೈನ ಧೀಕ್ಷೆ ಪಡೆದಿದ್ದಾರೆ. ಅವರು ಖಾಸಗಿ ಕಾಲೇಜಿನಲ್ಲಿ ಸಿವಿಲ್ ಇಂಜಿನಿಯರಿಂಗ್ ಓದುತ್ತಿದ್ದರು. ಇಂದು (ಫೆ.6) ಸೂರತ್‌ನಲ್ಲಿ ಅವರು ಸನ್ಯಾಸ ಧೀಕ್ಷೆ ಪಡೆದಿದ್ದಾರೆ.

ಇತ್ತೀಚಿಗೆ ಆಂಚಲ್ ಕುಮಾರಿಯವರು ಆಧ್ಯಾತ್ಮದ ಕಡೆ ವಾಲಿದ್ದರು. ಸಂಸಾರ ಸುಖಃ ಜೀವನಕ್ಕಿಂತ ಸನ್ಯಾಸತ್ವದ ಜೀವನವೇ ಶ್ರೇಷ್ಠ ಎಂದು ಈ ನಿರ್ಧಾರ ಕೈಗೊಂಡಿರುವುದಾಗಿ ಅವರು ಹೇಳಿಕೊಂಡಿದ್ದಾರೆ. ಯುವತಿಯ ಆಯ್ಕೆಯನ್ನು ಕುಟುಂಬಸ್ಥರು ಸಹ ಖುಷಿಯಿಂದ ಒಪ್ಪಿಕೊಂಡಿದ್ದಾರೆ ಎಂದು ವರದಿ ಮೂಲಕ ತಿಳಿದು ಬಂದಿದೆ.

- Advertisement -

Related news

error: Content is protected !!